ಕಾಲುವೆಗೆ ನೀರು ಹರಿಸಲು ಆಗ್ರಹ


Team Udayavani, Aug 7, 2018, 11:52 AM IST

vij-1.jpg

ಇಂಡಿ: ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಸಾವಿರಾರು ರೈತರು ಇಂಡಿ
ವಿಜಯಪುರ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಡಾ| ಪಿ.ರಾಜು ಅವರಿಗೆ
ಮನವಿ ಸಲ್ಲಿಸಿದರು.

ತಾಲೂಕಿನ ಹಿರೇರೂಗಿ, ಬೋಳೆಗಾಂವ, ತಡವಲಗಾ ಹಾಗೂ ಹಂಜಗಿ ಗ್ರಾಮದ ಜಮೀನುಗಳಿಗೆ ಕಾಲುವೆಗಳ
ಮೂಲಕ ನೀರು ಹರಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತ
ಸಂಘದ ಹಿರೇರೂಗಿ ಗ್ರಾಮ ಘಟಕ ಹಾಗೂ ವಿವಿಧ ಗ್ರಾಮಗಳ ರೈತ ಮುಖಂಡರು ಹಿರೇರೂಗಿ ಗ್ರಾಮದ ಪ್ರಮುಖ ವೃತ್ತದಲ್ಲಿ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಿದರು.

ಈ ವೇಳೆ ಬಿಜೆಪಿ ಮುಖಂಡ ದಯಾಸಾಗರ ಪಾಟೀಲ, ಅನಿಲಗೌಡ ಬಿರಾದಾರ, ಶೀಲವಂತ ಉಮರಾಣಿ ಮತ್ತಿತರರು ಮಾತನಾಡಿ, ರೈತರ ಹೋರಾಟದಲ್ಲಿ ಯಾವುದೇ ರಾಜಕೀಯ ಬೆರೆಸುವುದು ಬೇಡ. ಈ ಭಾಗದಲ್ಲಿ ಕಾಲುವೆಗಳಿಗಾಗಿ ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಆದರೆ ಭೂಮಿಯನ್ನು ಕಳೆದುಕೊಂಡರು ಅವರಿಗೆ ಸೂಕ್ತ ಪರಿಹಾರ ನೀಡದಿರುವುದು ವಿಪರ್ಯಾಸ ಸಂಗತಿ.

ಈ ಭಾಗದ ರೈತರು ತಮ್ಮ ಜಮೀನುಗಳಿಗೆ ನೀರು ಬರುತ್ತದೆ ಎಂಬ ನಂಬಿಕೆಯಿಂದ ಭೂಮಿ ಕೊಟ್ಟಿದ್ದಾರೆ. ಇಂದು ಹನಿ ನೀರು ಸಹಿತ ಈ ಗ್ರಾಮಗಳಿಗೆ ತಲುಪಿಸದೆ ಇರುವುದು ನಾಚಿಕೆಗೇಡು. ಇಂಡಿ ತಾಲೂಕಿನಲ್ಲಿ 60 ಕಿ.ಮೀ. ಭೀಮಾನದಿ ಹರಿದರೂ ಬರದ ಬವಣೆ ತಪ್ಪಿಲ್ಲ. ರೈತರು ಇಂದು ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ. ರೈತರ
ಪರವಾದ ಹೋರಾಟಗಳಿಗೆ ಸದಾ ಬೆಂಬಲ ನೀಡುವದಾಗಿ ಹೇಳಿದರು.

ರೈತ ಮುಖಂಡರು ಮಾತನಾಡಿ, ಗುತ್ತಿ ಬಸವಣ್ಣ ಏತ ನೀರಾವರಿ ಮುಖ್ಯ ಕಾಲುವೆ 148 ಕಾಮಗಾರಿ ಪೂರ್ಣಗೊಂಡಿದ್ದು 148 ಕಿ.ಮೀ. ನೀರು ಹರಿಸಬೇಕು. ಆದರೆ ಇನ್ನು ನೀರು ಹರಿಸುತ್ತಿಲ್ಲ. 127ರ ಕಾಲುವೆಯಲ್ಲಿ ಹೂಳು ತುಂಬಿದೆ. ಕಾಟಾಚಾರಕ್ಕೆ ಎನ್ನುವಂತೆ ಕೆಲಸ ಮಾಡಿದ್ದಾರೆ. ರೈತರು ರಾತ್ರಿ ಹೊತ್ತಿನಲ್ಲಿ ಬೆಳೆಗಳಿಗೆ ನೀರು ಉಣಿಸುತ್ತಿದ್ದಾರೆ. ಇದರಿಂದ ಸಾಕಷ್ಟು ರೈತರು ವಿಷ ಜಂತುಗಳ ಕಡಿತದಿಂದ ಸಾವನ್ನಪ್ಪಿದ್ದು ಕೂಡಲೆ ಹೆಸ್ಕಾಂ ಇಲಾಖೆಯವರು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ತ್ರೀಫೇಸ್‌ ವಿದ್ಯುತ್‌ ವಿತರಣೆ ಮಾಡಬೇಕು. ಬೇಡಿಕೆಗಳು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅದೃಶ್ಯಪ್ಪ ವಾಲಿ, ಶಿವಯೋಗಿ ರೂಗಿಮಠ, ಜಟ್ಟೆಪ್ಪ ಮರಡಿ, ಜಟ್ಟೆಪ್ಪ ಸಾಲೋಟಗಿ, ಭೀಮುಸುತ್ತಾರ, ತಾಪಂ ಸದಸ್ಯ ಶ್ರೀಶೈಲ ಗಿಣ್ಣಿ, ಶರಣು ಗಿಣ್ಣಿ, ಗುರಪ್ಪ ಅಗಸರ, ಭೀಮು ಉಪ್ಪಾರ, ಜಟ್ಟೆಪ್ಪ ಹಂಜಗಿ, ರಾಜಕುಮಾರ
ತೇಲಿ, ಜಟ್ಟೆಪ್ಪ ನಿಂಬಾಳ ಸೇರಿದಂತೆ ಅನೇಕ ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.