ತಾಳಿಕೋಟೆಯಲ್ಲಿ ಬೇಕಾಬಿಟ್ಟಿ ಕಾಮಗಾರಿ


Team Udayavani, Sep 10, 2018, 4:16 PM IST

vij-1.jpg

ತಾಳಿಕೋಟೆ: ನಗರೋತ್ಥಾನ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಪಟ್ಟಣದ ವಿವಿಧಡೆ ಕೈಗೊಳ್ಳಲಾಗುತ್ತಿದೆ. ಆದರೆ ಕಾಮಗಾರಿ ನಿರ್ವಹಣೆ ಬೇಕಾಬಿಟ್ಟಿ ಕೈಗೊಳ್ಳುವುದರ ಜೊತೆಗೆ ಗುತ್ತಿಗೆದಾರನ
ಕರಾಮತ್ತಿಗೆ ಒಳಚರಂಡಿ ಚೇಂಬರ್‌ಗಳು ಒಡೆದು ನೆಲದಲ್ಲಿ ಮುಚ್ಚಿ ಹೋಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

7 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಪೇಸ್‌ 3 ಯೋಜನೆಯಡಿ ಡಾಂಬರೀಕರಣ ಹಾಗೂ ಸಿಸಿ ರಸ್ತೆ, ಚರಂಡಿ ಒಳಗೊಂಡಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೈಗೊಂಡ ಕಾಮಗಾರಿಗಳಲ್ಲಿ ಕೆಲವೆಡೆ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಲಾಗಿದೆ. ಕೆಲವೆಡೆ ರಸ್ತೆ ಕಾಮಗಾರಿಗೆ ಮೆಟಿಂಗಮಾಡಿದ್ದರೆ ಇನ್ನೊಂದಡೆ ಇದ್ದ ರಸ್ತೆ ಮೇಲೆ ಡಾಂಬರೀಕರಣ ಕೈಗೊಂಡು ಗುತ್ತಿಗೆದಾರ ಕೈತೊಳೆದುಕೊಳ್ಳುತ್ತ ಸಾಗಿದ್ದಾನೆ.

ಯಾವುದೇ ಕಾಮಗಾರಿ ನಿರ್ವಹಿಸಬೇಕಾದರೆ ಪುರಸಭೆ ಸಂಬಂಧಿತ ಆಸ್ತಿ ಹಾನಿಗೊಳಗಾಗದಂತೆ ಗುತ್ತಿಗೆದಾರ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಒಂದು ವೇಳೆ ಅಚಾತುರ್ಯದಿಂದ ಹಾನಿಗೊಳಗಾದರೆ ಅದೇ ಗುತ್ತಿಗೆದಾರು
ಹಾನಿಗೀಡಾಗಿದ್ದನ್ನು ಸರಿಪಡಿಸಿ ಮುಂದಿನ ಕಾಮಗಾರಿ ಕೈಗೊಳ್ಳಬೇಕಾಗುತ್ತದೆ.

ಅದ್ಯಾವುದನ್ನು ಲೆಕ್ಕಿಸದೇ ರಸ್ತೆ ಡಾಂಬರೀಕರಣದ ನೆಪದಲ್ಲಿ ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಚೆಂಬರ್‌ನ ಸುತ್ತ ಕಡಿ ಕಂಕರಗಳನ್ನು ಹಾಕಿ ಚೇಂಬರ್‌ ಇಲ್ಲೇ ಇದೇ ಎಂಬುದನ್ನು ಗುರುತಿಸಲಿಕ್ಕೆ ಆಗದ ಹಾಗೆ ಡಾಂಬರೀಕರಣಕ್ಕೆ ಮುಂದಾಗಿರುವದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ನಿರ್ವಹಣೆ ಸಮಯದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಂತ ಹಂತದಲ್ಲಿ ತಪಾಸಣೆ ಕೈಗೊಳ್ಳುತ್ತ
ಸಾಗಬೇಕಾಗುತ್ತದೆ. ಆದರೆ ವಿವಿಧ ಕಾಮಗಾರಿಗಳಲ್ಲಿ ಬಹುತೇಕ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದರೂ ಯಾವ ಒಬ್ಬ ಅಧಿಕಾರಿಯೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳದಿರುವುದು ಅಧಿಕಾರಿಗಳ ನಡೆ ಮೇಲೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ಕೆಲವು ವಾರ್ಡ್‌ಗಳಲ್ಲಿ ಬೇಕಾ ಬಿಟ್ಟಿ ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವದನ್ನು ಮನಗಂಡ ಸಾರ್ವಜನಿಕರು ಹಾಗೂ ಕೆಲವು ಸಂಘಟಕರು ನಗರಾಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿಗಳಿಗೆ ಲಿಖೀತವಾಗಿ ದೂರು ಸಲ್ಲಿಸುತ್ತ ಬಂದರೂ ಯಾವುದೇ ಪ್ರಯೋಜನೆ ಆಗಿಲ್ಲ.
 
ಜಿಲ್ಲಾಧಿಕಾರಿಗಳು ಕಾಮಗಾರಿ ನಿರ್ವಹಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು. ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನ ಮೇಲೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ನಗರೋತ್ಧಾನ ಯೋಜನೆಯಡಿ ಪಟ್ಟಣದಲ್ಲಿ ನಡೆದಿರುವ ಡಾಂಬರೀಕರಣ ಹಾಗೂ ಸಿಸಿ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಅವುಗಳನ್ನು ಸುತ್ತಲೂ ಕಡಿ ಕಂಕರಗಳಿಂದ ಮುಚ್ಚಿ ಬೇಕಾಬಿಟ್ಟಿ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲಾ ನಗರಾಭಿವೃದ್ಧಿ ಯೋಜನೆ ಇಲಾಖೆಗೆ ಲಿಖೀತವಾಗಿ ದೂರು ಸಲ್ಲಿಸಿದ್ದೇವೆ. ಕೂಡಲೇ ಕಾಮಗಾರಿ ತಪಾಸಣೆ ಕೈಗೊಂಡು ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕು.
 ಜೈಭೀಮ ಮುತ್ತಗಿ, ಕರವೇ ತಾಲೂಕು ಉಪಾಧ್ಯಕ್ಷ

ಒಳಚರಂಡಿ ಚೇಂಬರ್‌ಗಳು ಒಡೆದು ಹಾಗೆ ಮುಚ್ಚಿ ರಸ್ತೆ ಕಾಮಗಾರಿ ಕೈಗೊಂಡಿರುವ ದೂರಿನ ಬಗ್ಗೆ ಎರಡು ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಈ ವಿಷಯ ಕುರಿತು ಗುತ್ತಿಗೆದಾರನ ಜೊತೆ ಈಗಲೇ ದೂರವಾಣಿ ಮೂಲಕ ಮಾತನಾಡುತ್ತೇನೆ. 
 ಮಹೇಶ ಕಲಾಲ್‌, ನಗರಾಭಿವೃದ್ಧಿ ಕೋಶದ ಎಇಇ

„ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.