ಶಿಕ್ಷಕರಿಗೆ ಬೇಡ ಅನಗತ್ಯ ಹೊಣೆ


Team Udayavani, Sep 30, 2018, 2:35 PM IST

vij-1.jpg

ಮುದ್ದೇಬಿಹಾಳ: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆ ಹೊತ್ತಿರುವ ಶಿಕ್ಷಕರನ್ನು ಇತರೆ ಚಟುವಟಿಕೆಗಳಿಂದ ಮುಕ್ತಗೊಳಿಸುವುದು ಅವಶ್ಯವಿದೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಸರೂರು ಗ್ರಾಮದ ಗುರು ರೇವಣಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ|ಎಸ್‌.ರಾಧಾಕೃಷ್ಣನ್‌ ಜಯಂತಿ, ನಿವೃ ತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಸರ್ಕಾರಿ ಶಿಕ್ಷಕರು ಹೊಂದಿಕೊಳ್ಳಬೇಕು. ಟೀಕೆಗಳನ್ನು ಸ್ವೀಕರಿಸಬೇಕು. ಟೀಕಿಸುವವರು ಇದ್ದುದರಿಂದಲೇ ಮನುಷ್ಯ ಕ್ರಿಯಾಶೀಲವಾಗಿ ಕೆಲಸ ಮಾಡುವುದು ಸಾಧ್ಯವಾಗುತ್ತದೆ ಎಂದರು.

ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ ಪ್ರಾಸ್ತಾವಿಕ ಮಾತನಾಡಿ, ಗುರು ದೇವರಾಗುತ್ತಾನೆ. ಗುರುವಾಗುವ ಶಕ್ತಿ ನೀಡಿದ ದೇವರನ್ನು ನಾವೆಲ್ಲ ಸ್ಮರಿಸಬೇಕು ಎಂದರು. ತಳೇವಾಡ ಸರ್ಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಸಂಗಮೇಶ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು. ವೇದಮೂರ್ತಿಗಳಾದ ಸಿದ್ದಯ್ಯ ಗುರುವಿನ್‌, ಕರಿಸಿದ್ದಯ್ಯ ಗುರುವಿನ್‌ ದಿವ್ಯಸಾನ್ನಿಧ್ಯ, ಗ್ರಾಪಂ ಅಧ್ಯಕ್ಷೆ ಕಮಲಾಬಾಯಿ ರಾಠೊಡ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಅಧ್ಯಕ್ಷೆ ಚನ್ನಮ್ಮ ತಂಗಡಗಿ, ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಜಿಪಂ ಸದಸ್ಯೆ ಪದ್ಮಾವತಿ ವಾಲಿಕಾರ, ಕಣಕಾಲ ಗ್ರಾಮೀಣ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್‌.ವೈ.ಬ್ಯಾಲ್ಯಾಳ, ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಂಗಮೇಶ ಹೊಲ್ದೂರ, ಶಿಕ್ಷಕರ ದಿನಾಚರಣೆ ಸಮಿತಿ ಅಧ್ಯಕ್ಷ ತಾಪಂ ಇಓ ಡಾ.ಎಸ್‌.ವೈ.ಭಜಂತ್ರಿ, ಉಪಾಧ್ಯಕ್ಷ ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ, ಕಾರ್ಯದರ್ಶಿ ಬಿಇಒ ಎಸ್‌.ಡಿ. ಗಾಂಜಿ, ಬಿಆರ್‌ಸಿಸಿ ಎಂ.ಎಂ. ಬೆಳಗಲ್ಲ, ರೇವಣಸಿದ್ದೇಶ್ವರ ಪ್ರೌಢಶಾಲೆ ಮುಖ್ಯಾಧ್ಯಾಪಕ ಪಿ.ಬಿ. ಕುಂಟರಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್‌.ಆರ್‌.ಕಟ್ಟಿಮನಿ, ಸ್ಥಳೀಯ ಗಣ್ಯವ್ಯಕ್ತಿ ಬಿ.ಜಿ. ಗೋಗಿ, ಪಿಡಿಒ ಖೂಬಾಸಿಂಗ್‌ ಜಾಧವ, ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಾದ ಎಸ್‌.ಎಸ್‌. ಬಾಣಿ, ಬಾಲಚಂದ್ರ

ನಡುವಿನಮನಿ, ಬಸಯ್ಯ ಹಿರೇಮಠ, ಕೆ.ಎಂ.ಇಬ್ರಾಹಿಂಪುರ, ಮುರುಗೇಶ ಹೊಕ್ರಾಣಿ, ಶಿವು ಬಿರಾದಾರ, ಕೆ.ಬಿ. ಸಜ್ಜನ, ಎಸ್‌.ಆರ್‌. ಸುಲ್ಪಿ, ಎನ್‌.ಎ. ತೊಂಡಿಹಾಳ, ಎಂ.ವೈ. ಗೌಂಡಿ, ಎಂ.ಎಸ್‌. ಬಿರಾದಾರ, ಬಿ.ಎಸ್‌. ಪಾಟೀಲ, ಟಿ.ಎಸ್‌. ಲಮಾಣಿ, ಅಶೋಕ ದಡ್ಡಿ ವೇದಿಕೆಯಲ್ಲಿದ್ದರು. ನಿವೃತ್ತ ಮುಖ್ಯಾಧ್ಯಾಪಕರಾದ ಅಶೋಕ ಮಣಿ, ಜಿ.ಎಸ್‌. ಅಥರ್ಗಾ, ಎಸ್‌.ಬಿ. ಕಿತ್ತೂರ, ಎಸ್‌.ಎ. ಹಾವರಗಿ, ವಿ.ಡಿ. ಐಹೊಳ್ಳಿ ಸೇರಿದಂತೆ ನಿವೃತ್ತ ಶಿಕ್ಷಕರನ್ನು, ದಾನಿಗಳನ್ನು ಸನ್ಮಾನಿಸಲಾಯಿತು. 

ಸಂಗೀತ ಶಿಕ್ಷಕ ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿ ನಾಡಗೀತೆ ಹಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಂ. ಬೆಳಗಲ್ಲ ಸ್ವಾಗತಿಸಿದರು. ಸಿಆರ್‌ಪಿ ಟಿ.ಡಿ. ಲಮಾಣಿ ಮತ್ತು ಶಿಕ್ಷಕ ಸಿದ್ದನಗೌಡ ಬಿಜೂರ ನಿರೂಪಿಸಿದರು. ಕಾರ್ಯಕ್ರಮಕ್ಕೆ ಬರುವ ಶಿಕ್ಷಕರಿಗಾಗಿ ವಿವಿಧೆಡೆಯಿಂದ ಖಾಸಗಿ ಶಾಲೆಗಳ ಶಾಲಾ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಗ್ರಾಮದ ಪ್ರಮುಖ ರಸ್ತೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಶಿಕ್ಷಕರು ಮತ್ತು ಶಿಕ್ಷಕ ವೃತ್ತಿಯ ಮಹತ್ವ ಸಾರುವ ಬರಹಗಳಿದ್ದ ಫಲಕಗಳನ್ನು ಪ್ರದರ್ಶಿಸಲಾಗಿತ್ತು.

ಕೆಲ ಶಾಲೆಗಳಿಗೆ ನೋಟಿಸ್‌: ಮುದ್ದೇಬಿಹಾಳ ಪಟ್ಟಣದ ಸಂತ ಕನಕದಾಸ ಸೇರಿದಂತೆ ಕೆಲ ಖಾಸಗಿ ಶಾಲೆಗಳು ಬಿಇಒ ಕಚೇರಿ ಆದೇಶ ಉಲ್ಲಂಘಿಸಿವೆ. ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಿಕ್ಷಕರನ್ನೂ ಕಳಿಸಿಲ್ಲ, ಶಾಲೆಗೆ ರಜೆಯನ್ನೂ ಕೊಟ್ಟಿಲ್ಲ. ಇಂಥ ಶಾಲೆಗಳ ಪಟ್ಟಿ ಮಾಡಿ ಆಯಾ ಶಾಲೆಗಳ ಮುಖ್ಯಾಧ್ಯಾಪಕರಿಗೆ ನೋಟಿಸ್‌ ಜಾರಿಗೊಳಸಲಾಗುತ್ತದೆ ಎಂದು ಬಿಇಒ ಎಸ್‌.ಡಿ. ಗಾಂಜಿ ತಿಳಿಸಿದ್ದಾರೆ.

ತಾಲೂಕಿನ ಹಲವು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿವೆ. ಮಕ್ಕಳಿಗೆ ಮೂಲಸೌಕರ್ಯ ಕೊರತೆ ಇದೆ. ಇವೆಲ್ಲವುಗಳ ಪರಿಹಾರಕ್ಕೆ 12.74 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಬೇಡಿಕೆ ಮಂಡಿಸಿದ್ದು ಶಿಕ್ಷಣ ಸಚಿವರನ್ನೂ ಭೇಟಿ ಮಾಡಿ ಚರ್ಚಿಸಲಾಗಿದೆ. ಈ ಬಗ್ಗೆ ಇನ್ಸ್‌ಪೆಕ್ಷನ್‌ ನಡೆಸುವಂತೆ ಸಚಿವರಿಗೆ ಆಹ್ವಾನ ನೀಡಲಾಗಿದೆ. ಸಚಿವರು ಮುಂದಿನ ತಿಂಗಳು ಈ ತಾಲೂಕಿಗೆ ಬರುವ ನಿರೀಕ್ಷೆಯಿದೆ. 
ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.