ಸೋತಾಗ ಹತಾಶರಾಗಬೇಡಿ: ಕೌಲಗಿ


Team Udayavani, Feb 21, 2019, 11:57 AM IST

vij-1.jpg

ವಿಜಯಪುರ: ಗೆಲುವಿಗೆ ಅಹಂ ಪಡುವವನು ಉಳಿಯಲಾರ, ಸೋತಾಗ ಕುಸಿದು ಕುಂತವನು ಬೆಳೆಯಲಾರ. ಗೆಲುವಿನ ಸಂಭ್ರಮ ನೆತ್ತಗೇರದಿರಲಿ, ಸೋಲಿನ ನೋವು ಮನಸ್ಸಿಗೆ ತಾಕದಿರಲಿ ಎಂದು ಎಕ್ಸ್‌ಲೆಂಟ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು. ನಗರದ ಎಕ್ಸ್‌ಲೆಂಟ್‌ ಪಪೂ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗಳ ಶುಭಕೋರುವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಯತ್ನಿಸದೇ ಸೋಲು ಒಪ್ಪಿಕೊಳ್ಳುವುದು ವಿದ್ಯಾರ್ಥಿಗಳ ಲಕ್ಷಣವಲ್ಲ. ಸಾಧಿಸುವ ಛಲ, ನಿರಂತರ ಓದು, ಸಮಯ ಪ್ರಜ್ಞೆ ಯಶಸ್ಸಿನ ಸೂತ್ರಗಳು. ನಮ್ಮ ಆತ್ಮವಿಶ್ವಾಸ ನಮ್ಮನ್ನು ಉತ್ತುಂಗ ಶಿಖರಕ್ಕೆ ಕೊಂಡೊಯುತ್ತದೆ. ಪರೀಕ್ಷೆಗೆ ಇನ್ನು ಕೆಲವೆ ದಿನ ಬಾಕಿ ಇರುವುದರಿಂದ ಚೆನ್ನಾಗಿ ಓದಿ
ಅರ್ಥೈಸಿಕೊಂಡು ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆದು ಕಲಿತ ಸಂಸ್ಥೆಗೂ, ಪಾಲಕರಿಗೂ ಕೀರ್ತಿ ತರಬೇಕು ಎಂದರು. 

ಶಿಕ್ಷಣ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ ಮಾತನಾಡಿ, ನೀವೆಲ್ಲರೂ ಕೂಡಿ ಕಲಿತಿದ್ದು ಸಂತೋಷಕ್ಕೆ ಕಾರಣವಾದರೆ ಮುಂದಿನ ಶಿಕ್ಷಣಕ್ಕೆ ಬೇರೆಡೆ ಹೋಗುವುದು ಅನಿವಾರ್ಯ ಎಂಬ ದುಃಖ. ಜೀವನದಲ್ಲಿ ಸಕಾರಾತ್ಮಕ ವಿಚಾರಗಳನ್ನು ರೂಢಿಸಿಕೊಳ್ಳಬೇಕು. 

ಒಂದೇ ಒಂದು ಘಟನೆ, ವಾಕ್ಯ, ಪದ ಕೂಡ ನಮ್ಮ ಬದುಕನ್ನು ಬದಲಾಯಿಸುವ ಶಕ್ತಿ ಹೊಂದಿದೆ ಎಂದರು. 8ನೇ ತರಗತಿಕಲಿತು ಶಾಲೆ ಬಿಟ್ಟು ಸೀರೆ ಮಾರುವ ಕಾರ್ಯವನ್ನು ಮಾಡಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಪ್ರಪಂಚದ ತುಂಬ ಶಾಖೆಗಳನ್ನು ವಿಸ್ತರಿಸಿದ ಮಹಾನ್‌ ಶಿಕ್ಷಣಪ್ರೇಮಿ ರಾಯಚಂದ್ರರ ಜೀವನ ಎಲ್ಲರಿಗೂ ಸ್ಪೂರ್ತಿ.
 
ನಿರ್ದೇಶಕ ರಾಜಶೇಖರ ಕೌಲಗಿ ಮಾತನಾಡಿದರು. ಶಿವಾನಂದ ಕಲ್ಯಾಣಿ, ವಿದ್ಯಾರ್ಥಿಗಳಾದ ಸೌಂದರ್ಯ, ಜಯಗೌರಿ, ಪೂಜಾ, ಸೃಜನಾ, ಶ್ವೇತಾ, ಸನ್ಮತಿ, ಅಮೃತಾ, ನಮ್ರಾ, ಭಾಗ್ಯಶ್ರೀ, ಸಲೇಹಾ, ಕುಮಾರ ಭುವನ, ಶಶಾಂಕ, ಪವನ ಅನಿಸಿಕೆಗಳನ್ನು ಹಂಚಿಕೊಂಡರು.

ಖ್ಯಾತ ಕಲಾವಿದ ಮಹಾಂತೇಶ ಹಡಪದ ಅವರಿಂದ ಹಾಸ್ಯೋತ್ಸವ ನಡೆಯಿತು. ಪ್ರಾಚಾರ್ಯ ಡಿ.ಎಲ್‌. ಬನಸೋಡೆ, ಶ್ರದ್ಧಾ ಜಾಧವ, ಬಾಗೇಶ ಮುರಡಿ, ಸಂದೀಪ ಹಳ್ಳೂರ ಇದ್ದರು . 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.