ಸ್ನಾನ ಮಾಡಲು ಕೆರೆಗೆ ಹೋಗಿ ಶವವಾದ ವ್ಯಕ್ತಿ

Team Udayavani, Mar 19, 2019, 11:37 AM IST

vij-1.jpg

ಮುದ್ದೇಬಿಹಾಳ: ಸ್ನಾನ ಮಾಡಲು ಕೆರೆಗೆ ತೆರಳಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಇಲ್ಲಿನ ಇಂದಿರಾ ವೃತ್ತದ ಬಳಿ ಇರುವ ಕೆರೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು ಸಂಜೆವರೆಗೂ ಶವಕ್ಕಾಗಿ ಹುಡುಕಾಟ ನಡೆಸಿದ್ದರೂ ಶವ ಪತ್ತೆಯಾಗದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಮಂಗಳವಾರ ಬೆಳಗ್ಗೆ ಮತ್ತೇ ಶವದ ಹುಡುಕಾಟಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ
ತೀರ್ಮಾನಿಸಿದ್ದಾರೆ.

ನೀರು ಪಾಲಾದವನನ್ನು ಮಹಾರಾಷ್ಟ್ರ ಮೂಲದ ಬಲೂನ್‌ ಮಾರಾಟ ಮಾಡಿ ಜೀವನ ನಿರ್ವಹಿಸುವ ಅಲೆಮಾರಿ ಜನಾಂಗಕ್ಕೆ ಸೇರಿದ ಬಾಬು ಪವಾರ್‌ (65) ಎಂದು ಗುರುತಿಸಲಾಗಿದ್ದು ಕೆರೆ ಪಕ್ಕದಲ್ಲೇ ಈತ ತನ್ನ ಕುಟುಂಬದ ಸದಸ್ಯರೊಂದಿಗೆ ಬಲೂನ್‌ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಬಾಬು ತನ್ನ ಕುಟುಂಬದ ಸದಸ್ಯರ ಸಮೇತ ಸಂಚರಿಸುತ್ತ ಬಲೂನು ಮಾರಿ ಜೀವನ ನಿರ್ವಹಿಸುತ್ತಿದ್ದ. ಕೆರೆ ಹತ್ತಿರ ಇರುವ ಮುಖ್ಯ ರಸ್ತೆ ಪಕ್ಕದಲ್ಲಿ ಈತನ ಕುಟುಂಬಕ್ಕೆ ಸೇರಿದ 4-5 ಜನರು ವಿವಿಧ ಆಕಾರದ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು. ಈ ಸಂದರ್ಭ ಬಾಬು ಸ್ನಾನ ಮಾಡಲೆಂದು ಪಕ್ಕದಲ್ಲೇ ಇದ್ದ ಕೆರೆಗೆ ಇಳಿದಿದ್ದಾನೆ.

ಇದನ್ನು ಬಲೂನು ಮಾರುತ್ತಿದ್ದ ಆತನ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಗಮನಿಸಿಲ್ಲ. ಆದರೆ ಬಾಬು ಕಾಲುಜಾರಿ ನೀರಲ್ಲಿ ಬಿದ್ದುದನ್ನು ಕೆಲ ಪ್ರತ್ಯಕ್ಷದರ್ಶಿಗಳು ಇವರ ಗಮನಕ್ಕೆ ತಂದಾಗಲೇ ದುರ್ಘ‌ಟನೆ ಅರಿವಿಗೆ ಬಂದಿದೆ. ತಕ್ಷಣವೇ ಬಲೂನ್‌ ಮಾರಾಟ ಸ್ಥಗಿತಗೊಳಿಸಿ ಎಲ್ಲರೂ ಕೆರೆಯತ್ತ ಧಾವಿಸಿ ಗೋಳಿಡತೊಡಗಿದರು. ಮಹಿಳೆಯರ ಆಕ್ರಂದನ ತಾರಕಕ್ಕೇರಿತ್ತು.

ವಿಷಯ ತಿಳಿದು ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಭಾರ ಠಾಣಾಧಿಕಾರಿ ರಾಜೇಂದ್ರ ಪೋದ್ದಾರ ನೇತೃತ್ವದಲ್ಲಿ ಧಾವಿಸಿ ಬಂದು ತಮ್ಮಲ್ಲಿರುವ ಸಲಕರಣೆಗಳ ಮೂಲಕ ಶವಕ್ಕಾಗಿ ಕೆರೆ ನೀರಲ್ಲಿ ಹುಡುಕಾಟ ನಡೆಸಿದರೂ ಕತ್ತಲಾಗುವವರೆಗೂ ಶವ ದೊರಕಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಮತ್ತೇ ಶವದ ಹುಡುಕಾಟ ಮುಂದುವರಿಸಲು ತೀರ್ಮಾನಿಸಲಾಗಿದೆ. 

ಘಟನೆ ಮಾಹಿತಿ ಪಡೆದ ತಹಶೀಲ್ದಾರ್‌ ವಿನಯ್‌ಕುಮಾರ ಪಾಟೀಲ, ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದು ಘಟನೆ ಮಾಹಿತಿ ಪಡೆದುಕೊಂಡರು. ಶವ ದೊರಕದ ಕಾರಣ ಇದುವರೆಗೂ ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ವರ್ಷದ ಹಿಂದೆ ಜೀರ್ಣೋದ್ಧಾರಗೊಳಿಸಿದ್ದ ಈ ಕೆರೆಯಲ್ಲಿ ಕೆಲ ತಿಂಗಳ ಹಿಂದೆ ಮೀನು ಹಿಡಿಯಲು ತೆರಳಿದ್ದ ಬಾಲಕರು ನೀರು ಪಾಲಾಗಿದ್ದರು. ಇದೀಗ ನಡೆದದ್ದು ಎರಡನೇ ಘಟನೆಯಾಗಿದೆ. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.