CONNECT WITH US  

ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್

2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿ ಗುರುವಾರ ಮಹತ್ವದ ತೀರ್ಪು ಪ್ರಕಟಿಸಿ, ಎಲ್ಲಾ ಆರೋಪಗಳಿಂದಲೂ ಮುಕ್ತಗೊಳಿಸಿದೆ. ಅಲ್ಲದೇ ಸೆಷನ್ಸ್ ಕೋರ್ಟ್ ನೀಡಿದ್ದ ತೀರ್ಪನ್ನು(ಎಲ್ಲಾ ಆರೋಪದಿಂದಲೂ ಸಲ್ಲು ದೋಷಮುಕ್ತ) ಹೈಕೋರ್ಟ್ ರದ್ದುಪಡಿಸಿದ್ದು, ಈ ಮೂಲಕ ಸಲ್ಲುಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮತ್ತೊಂದೆಡೆ ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಪ್ರಾಸಿಕ್ಯೂಷನ್ ತಿಳಿಸಿದೆ. ಪ್ರಕರಣದ ಕುರಿತ ತೀರ್ಪು ಓದಿದ ಬಾಂಬೆ ಹೈಕೋರ್ಟ್ ಜಡ್ಜ್ ನ್ಯಾ.ಎ.ಆರ್.ಜೋಶಿ, ಸಲ್ಮಾನ್ ಖಾನ್ ಕುಡಿದು ಕಾರು ಚಲಾಯಿಸುತ್ತಿದ್ದರು ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರವಿಲ್ಲ. ಅನುಮಾನದ ಆಧಾರದ ಮೇಲೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ. ಹಾಗಾಗಿ ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿರುವುದಾಗಿ ಹೇಳಿದರು. ತೀರ್ಪು ಪ್ರಕಟವಾದ ಬಳಿಕ ಸಲ್ಮಾನ್ ಖಾನ್ ಕಣ್ಣೀರುಹಾಕಿದ ಘಟನೆ ನಡೆಯಿತು. 

Trending videos

Back to Top