ದಂಗಲ್ ಖ್ಯಾತಿಯ ನಟಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ
Team Udayavani, Dec 10, 2017, 10:28 AM IST
ಹೊಸದಿಲ್ಲಿ : ದಂಗಲ್ ಖ್ಯಾತಿಯ ಬಾಲಿವುಡ್ ನಟಿ ಝೈರಾ ವಾಸಿಮ್ ಅವರಿಗೆ ವಿಮಾನ ಪ್ರಯಾಣದ ವೇಳೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಝೈರಾ ಅವರೇ ಈ ನೋವಿನ ವಿಚಾರವನ್ನು ಸಾಮಾಜಿಕ ತಾಣ ಇನ್ಸ್ಟಾಗ್ರಾಂನಲ್ಲಿ ಕಣ್ಣೀರಿಡುತ್ತಾ ಬಹಿರಂಗಪಡಿಸಿದ್ದಾರೆ.
ಇತ್ತೀಚೆಗೆ ದೆಹಲಿಯಿಂದ ಮುಂಬಯಿಗೆ ವಿಸ್ತಾರಾ ಏರ್ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂಬಂದಿಯ ಸೀಟ್ ನಲ್ಲಿ ಕುಳಿತಿದ್ದ ಮಧ್ಯವಯಸ್ಕ ಪುರುಷನೊಬ್ಬ ತನ್ನ ದೇಹದ ಭಾಗಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
‘ನಾನು ಮಲಗಿದ್ದ ವೇಳೆ ಆ ವ್ಯಕ್ತಿ ನನ್ನ ಕತ್ತಿನ ಭಾಗವನ್ನು ಸ್ಪರ್ಶಿಸುತ್ತಿದ್ದ ಆದರೆ ನಾನು ವಿಡಿಯೋ ಚಿತ್ರೀಕರಿಸಲು ಮಂದ ಬೆಳಕು ಅಡ್ಡಿ ಪಡಿಸಿತು.ಆದರೂ ನಾನು ಆತನ ಕೆಲ ಫೋಟೋಗಳನ್ನು ಕ್ಲಿಕ್ಕಿಸಿದೆ’ ಎಂದು ಹೇಳಿಕೊಂಡಿದ್ದಾರೆ.
ವಿಮಾನದಿಂದ ಇಳಿಯುತ್ತಿದ್ದಂತೆ ತನ್ನ ಮೇಲಾದ ದೌರ್ಜನ್ಯವನ್ನು ವಿಮಾನದ ಸಿಬಂದಿಗಳ ಗಮನಕ್ಕೆ ತಂದಿದ್ದಾರೆ.
ವಿಡಿಯೋದ ಕೊನಯಲ್ಲಿ ‘ನನಗೆ ನೋವಾಗಿದೆ. ಇದೇಯಾ ನೀವು ಹೆಣ್ಣು ಮಕ್ಕಳನ್ನು ನಡೆಸಿಕೊಳ್ಳುವ ರೀತಿ?’ಎಂದು ಝೈರಾ ಕಣ್ಣೀರಿಟ್ಟಿದ್ದಾರೆ.
ವಿಮಾನಯಾನ ಸಂಸ್ಥೆ ಈ ಬಗ್ಗೆ ತನಿಖೆಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?