ಹೀರೋಗಿಂತ “ಝೀರೊ’ನೇ ಮೆಚ್ಚಿದರು…: Watch
Team Udayavani, Nov 3, 2018, 4:30 PM IST
ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ “ಝೀರೊ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಶಾರೂಖ್ 52ನೇ ಬರ್ತ್ಡೇಗೆ ಸ್ಪೆಷಲ್ ಗಿಫ್ಟ್ ಆಗಿ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡಿದೆ. 3.14 ನಿಮಿಷದ ಟ್ರೈಲರ್ನಲ್ಲಿ ಕುಬ್ಜನ ವೇಷದಲ್ಲಿ ಶಾರುಖ್ ಕಾಣಿಸಿಕೊಂಡಿದ್ದಾರೆ.
ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ಅಬ್ಬರಿಸುತ್ತಿದ್ದು, ಯೂಟ್ಯೂಬ್ ಟ್ರೆಂಡಿಂಗ್ನಲ್ಲಿ ಮೊದಲ ಸ್ಥಾನದಲ್ಲಿದೆ. ಚಿತ್ರವನ್ನು ಆನಂದ್ ಎಲ್ ರೈ ಅವರು ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ ಶಾರೂಖ್ ಖಾನ್, ಬಾವ್ವಾ ಸಿಂಗ್ ಪಾತ್ರದಲ್ಲಿ ಮಿಂಚಿದ್ದಾರೆ. ಅಲ್ಲದೇ ಅನುಷ್ಕಾ ಶರ್ಮಾ ಹಾಗೂ ಕತ್ರಿನಾ ಕೈಫ್ ಲೀಡ್ ರೋಲ್ನಲ್ಲಿ ಅಭಿನಯಿಸಿದ್ದಾರೆ.
ಇನ್ನು ಈ ಹಿಂದೆ 2012 ರಲ್ಲಿ ಬಿಡುಗಡೆಯಾದ “ಜಬ್ ತಕ್ ಹೈ ಜಾನ್’ ಚಿತ್ರದಲ್ಲಿ ಶಾರೂಖ್ ಖಾನ್, ಅನುಷ್ಕಾ ಮತ್ತು ಕತ್ರಿನಾ ಕೈಫ್ ತೆರೆಯನ್ನು ಹಂಚಿಕೊಂಡಿದ್ದರು. ಇದೀಗ ಮತ್ತೆ “ಝೀರೋ’ ಸಿನಿಮಾದ ಮೂಲಕ ಈ ಮೂವರು ಸಿನಿ ಪರದೆಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವು ಡಿಸೆಂಬರ್ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?