ನಿರಂತರ ಮೂರನೇ ದಿನ ಮುಂಬಯಿ ಶೇರು 205 ಅಂಕ ಏರಿಕೆ
Team Udayavani, Dec 11, 2017, 5:01 PM IST
ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕತೆಯನ್ನು ಅನುಸರಿಸಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ನಿರಂತರ ಮೂರನೇ ದಿನವಾಗಿ, ಇಂದು ಸೋಮವಾರದ ವಹಿವಾಟನ್ನು 205 ಅಂಕಗಳ ಮುನ್ನಡೆಯೊಂದಿಗೆ 33,455.79 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಇಂದಿನ ವಹಿವಾಟನ್ನು 10,300 ಅಂಕಗಳ ಮೇಲ್ಮಟ್ಟದಲ್ಲಿ ಕೊನೆಗೊಳಿಸಿತು.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗೆಲ್ಲಲಿದೆ ಎಂಬ ಲೆಕ್ಕಾಚಾರವೇ ಇಂದು ಮುಂಬಯಿ ಶೇರು ಪೇಟೆಯ ತೇಜಿಗೆ ಕಾರಣವಾಯಿತು. ಸೆನ್ಸೆಕ್ಸ್ನ ಇಂದಿನ ದಿನಾಂತ್ಯದ ಎತ್ತರವು ನ.29ರ ಬಳಿಕದಲ್ಲಿ ದಾಖಲಾಗಿರುವ ಗರಿಷ್ಠ ಎತ್ತರವಾಗಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 653.12 ಅಂಕಗಳ ಮುನ್ನಡೆಯನ್ನು ಸಂಪಾದಿಸಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ವಹಿವಾಟನ್ನು 56.60 ಅಂಕಗಳ ಏರಿಕೆಯೊಂದಿಗೆ 10,322.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!