ಅಮೆರಿಕ-ಚೀನ ವಾಣಿಜ್ಯಸಮರ ಭೀತಿ: ಸೆನ್ಸೆಕ್ಸ್ 316 ಅಂಕ ಕುಸಿತ
Team Udayavani, Dec 21, 2018, 10:35 AM IST
ಮುಂಬಯಿ : ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸುಂಕ ಸಮರ ಮತ್ತೆ ತಾರಕಕ್ಕೇರುವ ಭೀತಿಯಲ್ಲಿ ಜಾಗತಿಕ ಶೇರು ಪೇಟೆಗಳಲ್ಲಿ ನಿಸ್ತೇಜಗೊಂಡಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 37 ಪೈಸೆಗಳ ಕುಸಿತವನ್ನು ಕಂಡು 70.07 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ 316.71 ಅಂಕಗಳ ಭಾರೀ ನಷ್ಟದೊಂದಿಗೆ 36,114.96 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 104.90 ಅಂಕಗಳ ನಷ್ಟದೊಂದಿಗೆ 10,846.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಮಾರುತಿ ಸುಜುಕಿ, ಎಕ್ಸಿಸ್ ಬ್ಯಾಂಕ್, ಎಸ್ ಬ್ಯಾಂಕ್, ಇನ್ಫೋಸಿಸ್, ರಿಲಯನ್ಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!