ಮುಂಬಯಿ ಶೇರು: ಆರಂಭಿಕ ಕುಸಿತದ ಬಳಿಕ 13 ಅಂಕ ಚೇತರಿಕೆ
Team Udayavani, Jun 18, 2018, 10:58 AM IST
ಮುಂಬಯಿ: ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 76 ಅಂಕಗಳ ಏರಿಕೆಯನ್ನು ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಅನಂತರದಲ್ಲಿ ಕುಸಿತಕ್ಕೆ ಗುರಿಯಾಯಿತು.
ಬೆಳಗ್ಗೆ 10.50ರ ಹೊತ್ತಿಗೆ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ತೋರಿದ ಸೆನ್ಸೆಕ್ಸ್ 13.71 ಅಂಕಗಳ ಏರಿಕೆಯನ್ನು ದಾಖಲಿಸಿ 35,635.85 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.80 ಅಂಕಗಳ ಏರಿಕೆಯನ್ನು ದಾಖಲಿಸಿ 10,821.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ವೇದಾಂತ, ಟಾಟಾ ಸ್ಟೀಲ್, ಕೋಲ್ ಇಂಡಿಯಾ, ಕೋಟಕ್ ಬ್ಯಾಂಕ್, ಪವರ್ ಗ್ರಡ್, ಹೀರೋ ಮೋಟೋ ಕಾರ್ಪ್, ಎಕ್ಸಿಸ್ ಬ್ಯಾಂಕ್, ಇನ್ಫೋಸಿಸ್ ಶೇರುಗಳು ಶೇ.3ರ ಕುಸಿತಕ್ಕೆ ಗುರಿಯಾದವು. ಹಾಗಿದ್ದರೂ ಮೆಟಲ್, ಬ್ಯಾಂಕಿಂಗ್, ಮತ್ತು ರಿಯಲ್ಟಿ ರಂಗದ ಶೇರುಗಳು ಶೇ.2ರಷ್ಟು ಏರಿದವು.
ಇಂದು ಬೆಳಗ್ಗಿನ ವಹಿವಾಟಿನ ಟಾಪ್ ಗೇನರ್ಗಳು : ಎಚ್ಪಿಸಿಎಲ್, ಬಿಪಿಸಿಎಲ್, ಐಸಿಐಸಿಐ ಬ್ಯಾಂಕ್, ಐಡಿಯಾ ಸೆಲ್ಯುಲರ್, ಟಾಟಾ ಮೋಟರ್. ಟಾಪ್ ಲೂಸರ್ಗಳು : ವೇದಾಂತ, ಹಿಂಡಾಲ್ಕೋ, ಟಾಟಾ ಸ್ಟೀಲ್, ಕೋಟಕ್ ಮಹೀಂದರ, ಗ್ರಾಸಿಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್