ಅಮೆರಿಕ-ಚೀನ ವಾಣಿಜ್ಯ ಸಮರ ಭೀತಿ: ಸೆನ್ಸೆಕ್ಸ್ 74 ಅಂಕ ಕುಸಿತ
Team Udayavani, Jun 18, 2018, 4:50 PM IST
ಮುಂಬಯಿ : ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ಜಾಗತಿಕ ವಾಣಿಜ್ಯ ಬಿಕ್ಕಟ್ಟಿಗೆ ಕಾರಣವಾಗುವ ಭೀತಿಯಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 73.88 ಅಂಕಗಳ ನಷ್ಟದೊದಿಗೆ 35,548.26 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 17.85 ಅಂಕಗಳ ಕುಸಿತವನ್ನು ಕಂಡು 10,799.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಒಟ್ಟು 2,796 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; 931 ಶೇರುಗಳು ಮುನ್ನಡೆ ಕಂಡವು; 1,710 ಶೇರುಗಳು ಹಿನ್ನಡೆಗೆ ಗುರಿಯಾದವು; 155 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಎಚ್ ಪಿ ಸಿ ಎಲ್, ಐಸಿಐಸಿಐ ಬ್ಯಾಂಕ್, ಐಡಿಯಾ ಸೆಲ್ಯುಲರ್, ಬಿಪಿಸಿಎಲ್, ಟಾಟಾ ಮೋಟರ್; ಟಾಪ್ ಲೂಸರ್ಗಳು : ಹಿಂಡಾಲ್ಕೋ, ವೇದಾಂತ, ಭಾರ್ತಿ ಏರ್ಟೆಲ್, ಕೋಟಕ್ ಮಹೀಂದ್ರ, ಬಜಾಜ್ ಫಿನಾನ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್