ಲಾಭ ನಗದೀಕರಣ : ಮುಂಬಯಿ ಶೇರು 67 ಅಂಕ ಕುಸಿತ
Team Udayavani, Jun 25, 2018, 11:01 AM IST
ಮುಂಬಯಿ : ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ತೀವ್ರಗೊಳ್ಳುವ ಭೀತಿಯಲ್ಲಿ ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ವಹಿವಾಟುದಾರರಿಂದ ಲಾಭ ನಗದೀಕರಣದ ಶೇರು ಮಾರಾಟ ನಡೆದ ಪ್ರಯುಕ್ತ ಸೆನೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 67 ಅಂಕಗಳ ನಷ್ಟದೊಂದಿಗೆ ಆರಂಭಿಸಿತು.
ಕಳೆದ ಶುಕ್ರವಾರದ ವಹಿವಾಟಿನಲ್ಲಿ 257.21 ಅಂಕಗಳ ಏರಿಕೆಯನ್ನು ದಾಖಲಿಸಿದ್ದ ಸೆನ್ಸೆಕ್ಸ್ ಇಂದು ಬೆಳಗ್ಗೆ 10.40ರ ಹೊತ್ತಿಗೆ 32.29 ಅಂಕಗಳ ನಷ್ಟದೊಂದಿಗೆ 35,657.31 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9.40 ಅಂಕಗಳ ನಷ್ಟದೊಂದಿಗೆ 10,812.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದರು ರೂಪಾಯಿ ದರ ಇಂದಿನ ಆರಂಭಿಕ ವಹಿವಾಟಿನಲ್ಲಿ 29 ಪೈಸೆಯಷ್ಟು ಕುಸಿದು 68.13 ರೂ. ಮಟ್ಟಕ್ಕೆ ಇಳಿದದ್ದು ಕೂಡ ಶೇರು ಮಾರುಕಟ್ಟೆಯ ಹಿನ್ನಡೆಗೆ ಕಾರಣವಾಯಿತು.
ಹೀರೋ ಮೋಟೋ ಕಾರ್ಪ್, ಟಾಟಾ ಮೋಟರ್, ಐಸಿಐಸಿಐ ಬ್ಯಾಂಕ್, ಐಟಿಸಿ, ಎಕ್ಸಿಸ್ ಬ್ಯಾಂಕ್, ಪವರ್ ಗ್ರಿಡ್, ಮಾರುತಿ ಸುಜುಕಿ, ಒಎನ್ಜಿಸಿ, ಎಚ್ ಡಿ ಎಫ್ ಸಿ, ಎನ್ಟಿಪಿಸಿ, ಆರ್ಐಎಲ್, ಎಸ್ ಬ್ಯಾಂಕ್, ಕೋಲ್ ಇಂಡಿಯಾ ಮತ್ತು ಎಸ್ಬಿಐ ಶೇರುಗಳು ಶೇ.13.9 ರಷ್ಟು ಇಳಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ