ಅಮೆರಿಕ-ಚೀನ ವಾಣಿಜ್ಯ ಬಿಕ್ಕಟ್ಟು : ಸೆನ್ಸೆಕ್ಸ್ 58 ಅಂಕ ನಷ್ಟ
Team Udayavani, Aug 24, 2018, 11:14 AM IST
ಮುಂಬಯಿ : ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಬಿಕ್ಕಟ್ಟು ಪರಿಹಾರ ಕಾಣುವ ಸಾಧ್ಯತೆಗಳು ಕ್ಷೀಣಿಸುತ್ತಿರುವಂತೆಯೇ ಜಾಗತಿಕ ಶೇರು ಮಾರುಕಟ್ಟೆಗಳು ನಿಸ್ತೇಜವಾಗಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 58 ಅಂಕಗಳ ಹಿನ್ನಡೆಗೆ ಗುರಿಯಾಯಿತು.
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 673.20 ಅಂಕಗಳನ್ನು ಸಂಪಾದಿಸಿದ ಸೆನ್ಸೆಕ್ಸ್ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ 36.20 ಅಂಕಗಳ ನಷ್ಟದೊಂದಿಗೆ 38,300.47 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12 ಅಂಕಗಳ ನಷ್ಟದೊಂದಿಗೆ 11,570.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್, ರಿಲಯನ್ಸ್, ಎಸ್ ಬ್ಯಾಂಕ್, ಐಸಿಐಸಿ ಬ್ಯಾಂಕ್, ಬಜಾಜ್ ಫಿನಾನ್ಸ್ ಶೇರುಗಳು ಅತ್ಯಂತ ಸಕ್ರಿಯವಾಗಿದ್ದವು.
ಟಾಪ್ ಗೇನರ್ಗಳು : ಯುಪಿಎಲ್, ಒಎನ್ಜಿಸಿ, ಪವರ್ ಗ್ರಿಡ್, ವಿಪ್ರೊ, ಬಜಾಜ್ ಫಿನಾನ್ಸ್; ಟಾಪ್ ಲೂಸರ್ಗಳು : ಎಸ್ ಬ್ಯಾಂಕ್, ಟೈಟಾನ್ ಕಂಪೆನಿ, ಸಿಪ್ಲಾ, ಸನ್ ಫಾರ್ಮಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ