ಸೆನ್ಸೆಕ್ಸ್‌, ನಿಫ್ಟಿ ಭರ್ಜರಿ ಜಿಗಿತ; ಹೊಸ ಸಾರ್ವಕಾಲಿಕ ದಾಖಲೆ

Team Udayavani, Aug 27, 2018, 4:47 PM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 442.35 ಅಂಕಗಳ ಭರ್ಜರಿ ಜಿಗಿತದೊಂದಿಗೆ 38,694.11 ಅಂಕಗಳ  ಹೊಸ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 134.85 ಅಂಕಗಳ (ಶೇ.1.17) ಏರಿಕೆಯನ್ನು ದಾಖಲಿಸಿ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರವಾಗಿ 11,691.95ಅಂಕಗಳ ಮಟ್ಟವನ್ನು ತಲುಪುವ ಸಾಧನೆ ಮಾಡಿತು. ಇದಕ್ಕೆ ಮುನ್ನ ವ್ಯವಹಾರದ ನಡುವಿನಲ್ಲಿ ಒಮ್ಮೆ ನಿಫ್ಟಿ ಇದೇ ಮೊದಲ ಬಾರಿಗೆ 11,700 ಅಂಕಗಳ ಮಟ್ಟವನ್ನು ದಾಟಿತ್ತು. 

ಈ ವರ್ಷ ಎಪ್ರಿಲ್‌ನಲ್ಲಿ ಸೆನ್ಸೆಕ್ಸ್‌ 577.73 ಅಂಕಗಳ ಮತ್ತು ನಿಫ್ಟಿ 197.65 ಅಂಕಗಳ ದಾಖಲೆಯ ಜಿಗಿತವನ್ನು ಮಾಡಿತ್ತು. ಆ ಬಳಿಕದಲ್ಲಿ ಸೆನ್ಸೆಕ್ಸ್‌ ಮತ್ತು ನಿಫ್ಟಿ ದಾಖಲಿಸಿರುವ ದೊಡ್ಡ ಜಿಗಿತ ಇಂದಿನದ್ದಾಗಿದೆ. 

ಭಾರತೀಯ ಶೇರು ಮಾರುಕಟ್ಟೆಯಲ್ಲಿ ಇಂದಿನ ತೇಜಿಗೆ ಜಾಗತಿಕ ಮಾರುಕಟ್ಟೆಗಳಲ್ಲಿನ ಏರಿಕೆಯೇ ಕಾರಣವಾಗಿತ್ತು. ಮೇಲಾಗಿ ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರಗಳನ್ನು ತಾನಿನ್ನು ಹಂತ ಹಂತವಾಗಿ ಏರಿಸುವುದಾಗಿ ಹೇಳಿದ್ದುದು ಹೂಡಿಕೆದಾರರಲ್ಲಿ ವಿಶೇಷ ವಿಶ್ವಾಸವನ್ನು ತುಂಬಿತ್ತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,934 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,451 ಶೇರುಗಳು ಮುನ್ನಡೆ ಸಾಧಿಸಿದವು; 1,265 ಶೇರುಗಳು ಹಿನ್ನಡೆ ಅನುಭವಿಸಿದವು; 218 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.