ಜಾಗತಿಕ ಶೇರು ಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ: Sensex 150 ಅಂಕ ನಷ್ಟ
Team Udayavani, Oct 9, 2018, 10:33 AM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಮಿಶ್ರ ಪ್ರತಿಕ್ರಿಯೆಯನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಪರಿಣಾಮ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ನಿನ್ನೆ ಸೋಮವಾರದ ವಹಿವಾಟನ್ನು 97.93 ಅಂಕಗಳ ನಷ್ಟದೊಂದಿಗೆ ಮುಗಿಸಿದ್ದ ಸೆನ್ಸೆಕ್ಸ್ ಇಂದು ಬೆಳಗ್ಗೆ 10.30 ರ ಹೊತ್ತಿಗೆ 6.06 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,480.44 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.80 ಅಂಕಗಳ ನಷ್ಟದೊಂದಿಗೆ 10,344.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಎಸ್ ಬ್ಯಾಂಕ್, ಕೋಲ್ ಇಂಡಿಯಾ, ಎಚ್ ಡಿ ಎಫ್ ಸಿ, ಅದಾನಿ ಪೋರ್ಟ್, ಲಾರ್ಸನ್, ಹೀರೋ ಮೋಟೋ ಕಾರ್ಪ್, ಟಿಸಿಎಸ್, ಎಕ್ಸಿಸ್ ಬ್ಯಾಂಕ್, ಟಾಟಾ ಸ್ಟೀಲ್, ಸನ್ ಫಾರ್ಮಾ, ಎಚ್ ಡಿ ಎಫ್ ಸಿ ಬ್ಯಾಂಕ್, ಎಚ್ ಯು ಎಲ್, ಇಂಡಸ್ ಇಂಡ್ ಬ್ಯಾಂಕ್, ವೇದಾಂತ, ಪವರ್ ಗ್ರಿಡ್, ಆರ್ಐಎಲ್, ಒಎನ್ಜಿಸಿ ಶೇರುಗಳು ಶೇ.4.60 ನಷ್ಟಕ್ಕೆ ಗುರಿಯಾದವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 18 ಪೈಸೆಗಳ ಚೇತರಿಕೆಯನ್ನು ಕಂಡು 73.88 ರೂ. ಮಟ್ಟಕ್ಕೆ ಏರುವಲ್ಲಿ ಸಫಲವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್