ರೂಪಾಯಿ ಚೇತರಿಕೆ : ಮುಂಬಯಿ ಶೇರು 461 ಅಂಕಗಳ ಭರ್ಜರಿ ಜಿಗಿತ
Team Udayavani, Oct 10, 2018, 4:21 PM IST
ಮುಂಬಯಿ : ಡಾಲರ್ ಎದುರು ತಳ ಮಟ್ಟ ಕಂಡಿದ್ದ ರೂಪಾಯಿ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ದೇಶೀಯ ಹೂಡಿಕೆ ಸಂಸ್ಥೆಗಳಿಂದ ಮುಂಚೂಣಿ ಶೇರುಗಳ ವ್ಯಾಪಕ ಖರೀದಿ ನಡೆದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಬುಧವಾರ Relief Rally ಕಂಡು 461.42 ಅಂಕಗಳ ಭರ್ಜರಿ ಏರಿಕೆಯೊಂದಿಗೆ ದಿನದ ವಹಿವಾಟನ್ನು 34,760.89 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 159.05 ಅಂಕಗಳ ಮುನ್ನಡೆಯನ್ನು ಕಂಡು ದಿನದ ವಹಿವಾಟನ್ನು 10,460.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಹಣಕಾಸು, ಆಟೋ, ಮೆಟಲ್ ರಂಗದ ಶೇರುಗಳು ಉತ್ತಮ ಖರೀದಿಯನ್ನು ಕಂಡವು. ಶೇರು ಪೇಟೆಯಲ್ಲಿಂದು ಒಟ್ಟು 2,800 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 2,060 ಶೇರುಗಳು ಮುನ್ನಡೆ ಕಂಡವು; 606 ಶೇರುಗಳು ಹಿನ್ನಡೆಗೆ ಗುರಿಯಾದವು; 134 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಡಾಲರ್ ಎದುರು ರೂಪಾಯಿ ಇಂದು 34 ಪೈಸೆಯ ಚೇತರಿಕೆಯನ್ನು ಕಂಡು 74.05 (ವಹಿವಾಟಿನ ನಡುವಿನ ದರ) ರೂ. ಮಟ್ಟಕ್ಕೆ ತಲುಪಿದುದು ಶೇರು ಮಾರುಕಟ್ಟೆಗೆ ಸಮಾಧಾನ ಉಂಟು ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್