ಮುಂಬಯಿ ಶೇರು 580 ಅಂಕಗಳ ಭರ್ಜರಿ ಏರಿಕೆ, ತಿಂಗಳ ಗರಿಷ್ಠ ಮಟ್ಟಕ್ಕೆ
Team Udayavani, Nov 2, 2018, 4:46 PM IST
ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿಕೆ, ಡಾಲರ್ ಎದುರು ರೂಪಾಯಿ ಚೇತರಿಕೆ ಮತ್ತು ವಿದೇಶಿ ಬಂಡವಾಳದ ಹೊಸ ಒಳ ಹರಿವು – ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 579.68 ಅಂಕಗಳ ಭರ್ಜರಿ ಜಿಗಿತದೊಂದಿಗೆ ಕಳೆದ ಒಂದು ತಿಂಗಳ ಗರಿಷ್ಠ ಮಟ್ಟವಾಗಿ 35,011.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 172.55 ಅಂಕಗಳ ಜಿಗಿತವನ್ನು ಸಾಧಿಸಿ ದಿನದ ವಹಿವಟನ್ನು 10,553 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ವಾರದ ನೆಲೆಯಲ್ಲಿ ಹೇಳುವುದಾದರೆ ಈ ವಾರ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಎರಡು ವಾರಗಳ ಸೋಲಿಗೆ ತಡೆ ಹಾಕಿವೆ. ಸೆನ್ಸೆಕ್ಸ್ 1,662.34 ಅಂಕಗಳನ್ನು (ಶೇ.5) ಸಂಪಾದಿಸಿದೆಯಾದರೆ ನಿಫ್ಟಿ 523 ಅಂಕಗಳನ್ನು (ಶೇ.5) ಕಲೆ ಹಾಕಿದೆ.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,807 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,611 ಶೇರುಗಳು ಮುನ್ನಡೆ ಸಾಧಿಸಿದವು; 1,054 ಶೇರುಗಳು ಹಿನ್ನಡೆಗೆ ಗುರಿಯಾದವು; 142 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು