ಮಂಕಾದ ವಿಶ್ವ ಶೇರು ಪೇಟೆ,ರೂಪಾಯಿ ಕುಸಿತ : ಸೆನ್ಸೆಕ್ಸ್ 61 ಅಂಕ ನಷ್ಟ
Team Udayavani, Nov 5, 2018, 4:22 PM IST
ಮುಂಬಯಿ : ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರದಿಂದಾಗಿ ಏರ್ಪಟ್ಟಿರುವ ಅನಿಶ್ಚಿತತೆ, ಏಶ್ಯನ್ ಶೇರು ಪೇಟೆಗಳಲ್ಲಿ ತೋರಿ ಬಂದಿರುವ ನೇತ್ಯಾತ್ಮಕತೆ, ದುರ್ಬಲ ರೂಪಾಯಿ, ವಿದೇಶಿ ಬಂಡವಾಳದ ಹೊರ ಹರಿವು – ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು 61 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 34,811.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,477ರ ಮಟ್ಟದಲ್ಲಿ ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ 67 ಪೈಸೆಯ ಕುಸಿತವನ್ನು ಕಂಡು 73.12 ರೂ. ಮಟ್ಟಕ್ಕೆ ತಳ್ಳಲ್ಪಟ್ಟದ್ದು ಶೇರು ಮಾರುಕಟ್ಟೆಗೆ ಅಪಥ್ಯವೆನಿಸಿತು.
ಕಳೆದ ಶುಕ್ರವಾರ ಸೆನ್ಸೆಕ್ಸ್ 580 ಅಂಕಗಳ ಜಿಗಿತವನ್ನು ದಾಖಲಿಸಿತ್ತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,792 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,290 ಶೇರುಗಳು ಮುನ್ನಡೆ ಸಾಧಿಸಿದವು; 1,308 ಶೇರುಗಳು ಹಿನ್ನಡೆಗೆ ಗುರಿಯಾದವು; 194 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್