ಏಶ್ಯನ್ ಶೇರು ಪೇಟೆಯಲ್ಲಿ ದೌರ್ಬಲ್ಯ: ಸೆನ್ಸೆಕ್ಸ್ 185 ಅಂಕ ಕುಸಿತ
Team Udayavani, Dec 4, 2018, 11:24 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ, ತೈಲ ಬೆಲೆಯ ಮತ್ತೆ ಏರುಗತಿ, ಡಾಲರ್ ಎದುರು ರೂಪಾಯಿ ದೌರ್ಬಲ್ಯ ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ ಶೇರುಗಳ ಭಾರೀ ಮಾರಾಟ – ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಬೆಳಗ್ಗಿನ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 11.20ರ ಹೊತ್ತಿಗೆ ಸೆನ್ಸೆಕ್ಸ್ 184.28 ಅಂಕಗಳ ನಷ್ಟದೊಂದಿಗೆ 36,056.72 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 41.90 ಅಂಕಗಳ ನಷ್ಟದೊಂದಿಗೆ 10,841.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪೈಸೆ ಕುಸಿತವನ್ನು ಕಂಡು 70.55 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಸ್ ಬ್ಯಾಂಕ್, ಸನ್ ಫಾರ್ಮಾ, ಎಚ್ ಡಿ ಎಫ್ ಸಿ, ಎಚ್ಯುಎಲ್, ಟಿಸಿಎಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !