ಎರಡು ದಿನಗಳ ಸೋಲಿಗೆ ಕೊನೆ: ಮುಂಬಯಿ ಶೇರು 61 ಅಂಕ ಏರಿಕೆ
Team Udayavani, Jan 24, 2019, 5:58 AM IST
ಮುಂಬಯಿ : ಎರಡು ದಿನಗಳ ನಿರಂತರ ಸೋಲಿನಿಂದ ಹೊರಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 28.27 ಅಂಕಗಳ ಅಲ್ಪ ಏರಿಕೆಯನ್ನು ದಾಖಲಿಸಿತು.
ಏಶ್ಯನ್ ಶೇರು ಪೇಟೆಗಳಲ್ಲಿ ಕಂಡು ಬಂದ ಧನಾತ್ಮಕತೆಯನ್ನು ಅನುಸರಿಸಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮಂಚೂಣಿಯ ಬ್ಲೂ ಚಿಪ್ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯಲ್ಲಿಂದು ಮುನ್ನಡೆ ಚಿಗುರಿಕೊಂಡಿತು.
ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್ 61.68 ಅಂಕಗಳ ಏರಿಕೆಯೊಂದಿಗೆ 36,170.15 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 7.60 ಅಂಕಗಳ ಏರಿಕೆಯೊಂದಿಗೆ 10,839.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ರಿಲಯನ್ಸ್, ಐಟಿಸಿ, ಎಸ್ ಬ್ಯಾಂಕ್, ಇನ್ಫೋಸಿಸ್, ಸನ್ ಫಾರ್ಮಾ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 14 ಪೈಸೆಗಳ ಏರಿಕೆಯನ್ನು ದಾಖಲಿಸಿ 71.19 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?