ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ: 34 ಅಂಕ ಏರಿಕೆ
Team Udayavani, Feb 5, 2019, 11:28 AM IST
ಮುಂಬಯಿ : ಆರ್ ಬಿ ಐ ದರ ನೀತಿ ಸಭೆ ಪ್ರಕೃತ ಜಾರಿಯಲ್ಲಿರುವ ಕಾರಣ ವಹಿವಾಟುದಾರರು ಮತ್ತು ಹೂಡಿಕೆದಾರರು ಸದ್ಯ ನೇಪಥ್ಯಕ್ಕೆ ಸರಿದಿರುವ ಹೊರತಾಗಿಯೂ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಮಂಗಳವಾರದ ವಹಿವಾಟಿನಲ್ಲಿ 34.07 ಅಂಕಗಳ ಮುನ್ನಡೆಯನ್ನು ದಾಖಲಿಸಿ 36,616.81 ಅಂಕಗಳ ಮಟ್ಟಕ್ಕೇರಿತು.
ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 22.10 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,934.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಟಾಪ್ ಗೇನರ್ಗಳಾಗಿ ಮೂಡಿ ಬಂದ ಹೀರೋ ಮೋಟೋ ಕಾರ್ಪ್, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ, ಮಾರುತಿ ಮತ್ತು ಮಹೀಂದ್ರ ಶೇರುಗಳು ಶೇ.2.66ರ ಏರಿಕೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,709 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 859 ಶೇರುಗಳು ಮುನ್ನಡೆ ಸಾಧಿಸಿದವು; 1,703 ಶೇರುಗಳು ಹಿನ್ನಡೆಗೆ ಗುರಿಯಾದವು; 147 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್