ಮುಂಬಯಿ ಶೇರು 237 ಅಂಕ ನಷ್ಟ, ಟಾಟಾ ಮೋಟರ್ ಶೇರು ಶೇ.14 ಕುಸಿತ
Team Udayavani, Feb 8, 2019, 5:26 AM IST
ಮುಂಬಯಿ: ಅಮೆರಿಕ – ಚೀನ ವಾಣಿಜ್ಯ ಸುಂಕ ಸಮರ ಮತ್ತೆ ಜಗತ್ತನ್ನು ಕಾಡಲಿರುವ ಭೀತಿಯ ನಡುವೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಟಾ ಮೋಟರ್ ಶೇರು ಧಾರಣೆ ಶೇ.14ರಷ್ಟು ಕುಸಿದು ಮಾರುಕಟ್ಟೆಗೆ ಶಾಕ್ ನೀಡಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 237.27 ಅಂಕಗಳ ನಷ್ಟದೊಂದಿಗೆ 36,733.82 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 72.90 ಅಂಕಗಳ ನಷ್ಟದೊಂದಿಗೆ 10,996.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಟಾ ಮೋಟರ್, ರಿಲಯನ್ಸ್, ಬಜಾಜ್ ಆಟೋ, ಎಸ್ ಬ್ಯಾಂಕ್, ಟೆಕ್ ಮಹೀಂದ್ರ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 13 ಪೈಸೆಗಳ ಜಿಗಿತವನ್ನು ದಾಖಲಿಸಿ 71.32 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್ ಕಚ್ಚಾ ತೈಲ ಶೇ.0.57ರ ಇಳಿಕೆಯೊಂದಿಗೆ ಬ್ಯಾರಲ್ಗೆ 62.33 ಡಾಲರ್ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್