ಸೆನ್ಸೆಕ್ಸ್ 424 ಅಂಕಗಳ ಭಾರೀ ನಷ್ಟ; ಟಾಟಾ ಮೋಟರ್ ಶೇ.17 ಕುಸಿತ
Team Udayavani, Feb 8, 2019, 10:55 AM IST
ಮುಂಬಯಿ : ಅಮೆರಿಕ-ಚೀನ ನಡುವಿನ ವಾಣಿಜ್ಯ ಸುಂಕ ಸಮರ ಮತ್ತೆ ಕಳವಳಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಜಾಗತಿಕ ಪೇಟೆಗಳಲ್ಲಿ ನೇತ್ಯಾತ್ಮಕ ಸನ್ನಿವೇಶ ಕಂಡು ಬಂದಿದ್ದು ಇದರ ಪ್ರತಿಫಲನ ಎಂಬಂತೆ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಹಿವಾಟಿನಲ್ಲಿ 424.61 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 36,546.48 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 125.80 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,943.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಟಾಟಾ ಮೋಟರ್ ಶೇರು ಇಂದು ಶೇ.14ರಷ್ಟು ಕುಸಿದದ್ದು ಮಾರುಕಟ್ಟೆಗೆ ಒಂದು ಆಘಾತವೆನಿಸಿತು. ಮೆಟಲ್ ಮತ್ತು ಆಟೋ ಕ್ಷೇತ್ರದ ಶೇರುಗಳ ದಿನದ ವಹಿವಾಟಿನ ಕೊನೇ ತಾಸಿನಲ್ಲಿ ಭಾರೀ ಮಾರಾಟವನ್ನು ಕಂಡದ್ದೇ ಮುಂಬಯಿ ಶೇರು ಪೇಟೆಯ ಕುಸಿತಕ್ಕೆ ಕಾರಣವಾಯಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,650 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 952 ಶೇರುಗಳು ಮುನ್ನಡೆ ಸಾಧಿಸಿದವು; 1,574 ಶೇರುಗಳು ಹಿನ್ನಡೆಗೆ ಗುರಿಯಾದವು; 124 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ