ಮೋಟಾರು ವಾಹನ ಶೇರುಗಳ ಭಾರೀ ಮಾರಾಟ: ಸೆನ್ಸೆಕ್ಸ್ 151ಅಂಕ ನಷ್ಟ
Team Udayavani, Feb 11, 2019, 11:17 AM IST
ಮುಂಬಯಿ : ಮೋಟಾರು ವಾಹನ ಉತ್ಪಾದನಾ ರಂಗದ ಶೇರುಗಳು ಭಾರೀ ಮಾರಾಟದ ಒತ್ತಡಕ್ಕೆ ಗುರಿಯಾದ ಕಾರಣ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ವಹಿವಾಟನ್ನು 151.45 ಅಂಕಗಳ ನಷ್ಟದೊಂದಿಗೆ 36,395.03 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 49.80 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,888.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಸೆನ್ಸೆಕ್ಸ್ ಕಳೆದ ಎರಡು ದಿನಗಳ ನಿರಂತರ ವಹಿವಾಟಿನಲ್ಲಿ 429 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಇಂದಿನ ವಹಿವಾಟಿನಲ್ಲಿ ಮಹೀಂದ್ರ ಶೇರು ಶೇ.5ರಷ್ಟು ಕುಸಿಯಿತು. ಉಳಿದಂತೆ ಒಎನ್ಜಿಸಿ, ಬಜಾಜ್ ಫಿನಾನ್ಸ್, ರಿಲಯನ್ಸ್, ಎಸ್ಬಿಐ, ಹೀರೋ ಮೋಟೋ ಕಾರ್ಪ್, ಐಸಿಐಸಿಐ ಬ್ಯಾಂಕ್, ವೇದಾಂತ, ಲಾರ್ಸನ್, ಎಸ್ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಶೇರುಗಳು ಶೇ.2.54ರಷ್ಟು ಕುಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,712 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 835 ಶೇರುಗಳು ಮುನ್ನಡೆ ಸಾಧಿಸಿದವು; 1,714 ಶೇರುಗಳು ಹಿನ್ನಡೆಗೆ ಗುರಿಯಾದವು; 163 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್