ಮುಂಬಯಿ ಶೇರು ನಿರಂತರ 3ನೇ ದಿನ ಜಿಗಿತ; 216 ಅಂಕ ಜಂಪ್
Team Udayavani, Mar 13, 2019, 11:01 AM IST
ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ ಚುನಾವಣಾ ಪೂರ್ವ ರಾಲಿ ಮುಂದುವರಿದಿದ್ದು ಇಂದು ಬುಧವಾರ ನಿರಂತರ ಮೂರನೇ ದಿನವಾಗಿ ಸೆನ್ಸೆಕ್ಸ್ 216.51 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 37,752.17 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 40.50 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 11,341.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಇಂಡಸ್ ಇಂಡ್ ಬ್ಯಾಂಕ್ ಶೇರು ಶೇ.4.15ರ ಜಿಗಿತವನ್ನು ಕಂಡಿತು. ಇದನ್ನು ಅನುಸರಿಸಿ ಎಸ್ ಬ್ಯಾಂಕ್, ಬಜಾಜ್ ಫಿನಾನ್ಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಎಸ್ಬಿಐ, ಬಜಾಜ್ ಆಟೋ, ಆರ್ಐಎಲ್, ಎಚ್ ಸಿ ಎಲ್ ಟೆಕ್, ಎಚ್ ಡಿ ಎಫ್ ಸಿ ಮತ್ತು ಐಸಿಐಸಿಐ ಬ್ಯಾಂಕ್ ಶೇ.3.67ರ ಏರಿಕೆಯನ್ನು ದಾಖಲಿಸಿದವು. ಡಾಲರ್ ಎದುರು ರೂಪಾಯಿ ಇಂದು 24 ಪೈಸೆಯ ಜಿಗತವನ್ನು ದಾಖಲಿಸಿ 69.47 ರೂ. ಮಟ್ಟದಲ್ಲಿ ವ್ಯವಹರಿಸುತ್ತಿತ್ತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2.888 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,077 ಶೇರುಗಳು ಮುನ್ನಡೆ ಸಾಧಿಸಿದವು; 1.757 ಶೇರುಗಳು ಹಿನ್ನಡೆಗೆ ಗುರಿಯಾದವು; 155 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್