CONNECT WITH US  

ಕಸ, ಶೌಚಮುಕ್ತ ಜಿಲ್ಲೆಯನ್ನಾಗಿಸಿ

ಕೊಳ್ಳೇಗಾಲ: ಕಸಮುಕ್ತ ಮತ್ತು ಶೌಚಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸಬೇಕೆಂದು ಜಿಪಂ ಸಿಇಒ ಡಾ. ಹರೀಶ್‌ಕುಮಾರ್‌ ಹೇಳಿದರು. 

ನಗರದ ಗುರುಭವನದಲ್ಲಿ ಏರ್ಪಡಿಸಿದ್ದ ಸ್ವತ್ಛ ಭಾರತ ಯೋಜನೆಯಡಿ ಶೌಚಾಲಯ ಬಳಕೆ ಅಭಿಯಾನ ಕುರಿತ ಜಾಗೃತ ದಳದ ಸದಸ್ಯರಿಗೆ ಒಂದು ದಿನದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಹಾಗೂ ಸ್ತ್ರೀಶಕ್ತಿ ಮಹಿಳಾ ಸಂಘದ ಸದಸ್ಯರು, ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ವತ್ಛತೆ ಅರಿವು ಮೂಡಿಸುವ ಪ್ರಯತ್ನ ಮಾಡಿದಾಗ ಮಾತ್ರ ಜಿಲ್ಲೆ ಶೌಚ ಮುಕ್ತ ಮತ್ತು ಕಸಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯ ಎಂದರು.

ಪ್ರತಿ ಗ್ರಾಪಂಗಳಲ್ಲಿ ನೇಮಕಗೊಂಡಿರುವ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಮತ್ತು ಕಡ್ಡಾಯವಾಗಿ ನಿರ್ಮಾಣ ಮಾಡಿಕೊಳ್ಳಲು ತಿಳಿವಳಿಕೆ ನೀಡಬೇಕು. ಶೌಚಾಲಯ ನಿರ್ಮಾಣ ಮಾಡಿದ ಬಳಿಕ ಅದರ ಸ್ವತ್ಛತೆಯ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಸಮಾಜದ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಿ ಪ್ರತಿ ಗ್ರಾಮ ಮಟ್ಟದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಇಒ  ಉಮೇಶ್‌, ಸಮಾಜ ಕಲ್ಯಾಣಾಧಿಕಾರಿ ಮಂಜುಳ, ಬಿಇಒ ಶಿವಲಿಂಗಯ್ಯ, ಸಿಡಿಪಿಒ ನಾಗೇಶ್‌ ಇತರರಿದ್ದರು.

Trending videos

Back to Top