CONNECT WITH US  

ಕೆ.ಎಸ್‌.ಈಶ್ವರಪ್ಪ ನ್ಯಾಯಾಲಯಕ್ಕೆ ಹಾಜರು

ಗುಂಡ್ಲುಪೇಟೆ: ಕಳೆದ ವಿಧಾನಸಭೆಯ ಉಪಚುನಾವಣೆಯ ಮತಯಾಚನೆ ಸಂದರ್ಭದಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಪಟ್ಟಣದ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದರು.

ಸಹಕಾರ ಸಚಿವರಾಗಿದ್ದ ಎಚ್‌.ಎಸ್‌.ಮಹದೇವಪ್ರಸಾದ್‌ ನಿಧನದ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಾಟಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಭಾಷಣ ಮಾಡಿದ್ದಾರೆಂದು ಅಂದಿನ ಸೆಕ್ಟರ್‌ ಮ್ಯಾಜಿಸ್ಟ್ರೇಟ್‌ ಚಿಕ್ಕಣ್ಣ ನೀತಿ ಸಂಹಿತೆ ಉಲ್ಲಂ ಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಹಿಂದಿನ ವಿಚಾರಣೆಗೆ ಕೆ.ಎಸ್‌.ಈಶ್ವರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ವಾರೆಂಟ್‌ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದ ಈಶ್ವರಪ್ಪ, ತಮ್ಮ ಎಲ್ಲಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದ್ದು ಈ ಪ್ರಕರಣವನ್ನೂ ಅಲ್ಲಿಗೆ ವರ್ಗಾಯಿಸುವಂತೆ ವಕೀಲರ ಮೂಲಕ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಎನ್‌.ಮಲ್ಲೇಶ್‌, ಪುರಸಭೆ ಅಧ್ಯಕ್ಷ ಪಿ.ಗಿರೀಶ್‌, ರಾಜ್ಯ ಸಮಿತಿಯ ಸದಸ್ಯ ಸಿ.ಹುಚ್ಚೇಗೌಡ, ಮುಖಂಡರಾದ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಹಲವರು ಇದ್ದರು.


Trending videos

Back to Top