CONNECT WITH US  

ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಿದು

ಚಾಮರಾಜನಗರ: ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಇಂದು ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನವಾಗಿದೆ ಎಂದು ಸಂಸದ ಆರ್‌. ಧ್ರುವನಾರಾಯಣ ಹರ್ಷ ವ್ಯಕ್ತಪಡಿಸಿದರು. 

ಹರದನಹಳ್ಳಿ ಕೆವಿಕೆಯಲ್ಲಿ ನೂತನ ಕೃಷಿ ಕಾಲೇಜು ಪ್ರಾರಂಭೋತ್ಸವ ಸಮಾರಂಭದಲ್ಲಿ  ಮಾತನಾಡಿದ ಅವರು, ಕೃಷಿ ವಿಜ್ಞಾನ ಕಾಲೇಜು ಜಿಲ್ಲೆಯಲ್ಲಿ ಆರಂಭವಾಗಬೇಕೆಂದು ನಾನು ಬಹಳ ದಿನಗಳಿಂದ ಕನಸು ಕಂಡು ಅದನ್ನು ನನಸು ಮಾಡಲು ಪ್ರಯತ್ನಿಸಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿದ್ದೇನೆ.

ಈ ವರ್ಷದ ಫೆಬ್ರವರಿಯಲ್ಲಿ ಅವರು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ವಿಜ್ಞಾನ ಕಾಲೇಜು ಮಂಜೂರು ಮಾಡಿದರು. ಬಳಿಕ ಈಗಿನ ಮುಖ್ಯಮಂತ್ರಿ  ಕುಮಾರಸ್ವಾಮಿ ಕಾಲೇಜು ಆರಂಭಕ್ಕೆ ಒಪ್ಪಿಗೆ ನೀಡಿದರು. ಹಿಂದಿನ ಕೃಷಿ ಸಚಿವ ಕೃಷ್ಣಭೈರೇಗೌಡ, ಈಗಿನ ಕೃಷಿ ಸಚಿವ ಶಿವಶಂಕರರೆಡ್ಡಿ ಇದಕ್ಕೆ ಬೆನ್ನೆಲುಬಾಗಿ ನಿಂತರು ಎಂದು ಸ್ಮರಿಸಿದರು.

ಜಿಲ್ಲೆಯಲ್ಲಿ ಅರಿಶಿನ ಸಂಸ್ಕರಣಾ ಘಟಕ ಮಂಜೂರು ಮಾಡಬೇಕೆಂದು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದಾರೆ. ಹಾಗೆಯೇ ನೂತನ ಕೃಷಿ ಕಾಲೇಜಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಕೃಷಿ ವಿಜ್ಞಾನ ಕಾಲೇಜಿನಲ್ಲಿ ಓದಿದ ಪದವೀಧರರಿಗೆ ಶೇ.100ರಷ್ಟು ಉದ್ಯೋಗ ಖಚಿತ. ಕೃಷಿಯಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಬೇಕು. ಹೆಚ್ಚಿನ ಇಳುವರಿ ತೆಗೆಯಲು ಸಂಶೋಧನೆ ಅಗತ್ಯ ಎಂದರು.

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top