CONNECT WITH US  

ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ

ಚಾಮರಾಜನಗರ: ನಗರಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಸದಸ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸನ್ಮಾನಿಸಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿದರು.

ನಗರಸಭೆಯ 8 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸ ತಂದಿದೆ. ಚುನಾಯಿತರಾದ ಸದಸ್ಯರೆಲ್ಲರೂ ತಮ್ಮ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯನಿರ್ವಹಿಸಿ ಮತದಾರರ ಆಶೋತ್ತರವಾಗಿ ಬದ್ದರಾಗಿ ಕೆಲಸ ಮಾಡಬೇಂದು ಸಲಹೆ ನೀಡಿದರು.

ಮತದಾರ ಪ್ರಭುಗಳು ನೀಡಿರುವ ತೀರ್ಪನು °ಪ್ರತಿಯೊಬ್ಬರೂ ಗೌರವಿಸಿ ನಾಗರಿಕರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸಿ. ಸರ್ಕಾರದ ಅನುದಾನವನ್ನು ಬಳಸಿಕೊಂಡು ಪಟ್ಟಣವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು ಎಂದು ಸಲಹೆ ನೀಡಿದರು. 

ನಗರಸಭೆಯ ನೂತನ ಸದಸ್ಯರಾದ ಚಿನ್ನಮ್ಮ, ಕಲಾವತಿ, ಚಂದ್ರಕಲಾ, ನೀಲಮ್ಮ, ಭಾಗ್ಯ ಶಾಂತಿ ಹಾಗೂ ಆರ್‌.ಪಿ ನಂಜುಂಡಸ್ವಾಮಿ ಅವರನ್ನು ಸಚಿವರು ಅಭಿನಂದಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮದ್‌ ಅಸರ್‌, ಕೆಪಿಸಿಸಿ ಸದಸ್ಯ ಸೈಯದ್‌ರಫಿ ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್‌, ತಾಪಂ ಸದಸ್ಯ ಮಹದೇವಶೆಟ್ಟಿ, ನಾಗರಾಜು ನಸ್ರುಲ್ಲಾಖಾನ್‌ ಮಹದೇವಯ್ಯ ನಯಾಜ್‌, ನಾಗಶೆಟ್ಟಿ, ಶ್ರೀಕಾಂತ್‌ ಮತ್ತಿತರರಿದ್ದರು.


Trending videos

Back to Top