ಚಾಮರಾಜನಗರ ಕಾಂಗ್ರೆಸ್‌ನ ಭದ್ರಕೋಟೆ

Team Udayavani, Mar 16, 2019, 7:38 AM IST

chamaraja.jpg

ಚಾಮರಾಜನಗರ: ಚಾಮರಾಜನಗರ ಕಾಂಗ್ರೆಸ್‌ನ ಭದ್ರಕೋಟೆ. ಇಲ್ಲಿ ಕಾಂಗ್ರೆಸ್‌ ಪಕ್ಷ ಅತ್ಯಂತ ಗಟ್ಟಿಯಾಗಿದೆ. ಧ್ರುವನಾರಾಯಣ 10 ವರ್ಷಗಳ ಕಾಲ ಕೆಲಸ ಮಾಡಿ, ಕರ್ನಾಟಕ ಮಾತ್ರವಲ್ಲ ದೇಶದಲ್ಲೇ ಉತ್ತಮ  ಹೆಸರು ಗಳಿಸಿದ್ದಾರೆ. ಇನ್ನೂ ಮುಂದಿನ 10 ವರ್ಷವೂ ಅವರೇ ಆಯ್ಕೆಯಾಗುತ್ತಾರೆ. ಸಂಸದ ಮಾತ್ರವಲ್ಲ ಕೇಂದ್ರ ಸಚಿವರೂ ಆಗುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ರಾಜಕಾರಣದ ಮುಖ್ಯ ಉದ್ದೇಶ. ದೇಶಕ್ಕೆ ನಾಡಿಗೆ ಊರಿಗೆ ಒಳ್ಳೆಯದಾಗಬೇಕು. ಸರ್ಕಾರದ ಕೆಲಸಗಳನ್ನು ಜನರಿಗೆ ತಲುಪಿಸಬೇಕು. ಸಮಾಜದಲ್ಲಿ ಸಾಮರಸ್ಯ ಮೂಡಿಸಬೇಕು. ಧ್ರುವನಾರಾಯಣರಂಥ ಸಂಸದರು ಸಿಗುವುದು ಬಹಳ ಕಷ್ಟ. ಮುಂದಿನ ಲೋಕಸಭಾ ಚುನಾವಣೆ ನಂತರ ಹೊಸ ಸರ್ಕಾರ ಬಂದು, ರಾಹುಲ್‌ ಗಾಂಧಿ ಪ್ರಧಾನಿಯಾಗುವುದನ್ನು ನಾವೆಲ್ಲ ನೋಡಬೇಕು ಎಂದರು.

ನಮ್ಮ ಸರ್ಕಾರ ಅನೇಕ ಯೋಜನೆ ನೀಡಿದೆ: ಮನಮೋಹನಸಿಂಗ್‌ ಪ್ರಧಾನಿಯಾಗಿದ್ದಾಗ ಅನೇಕ ಹೊಸ ಕಾರ್ಯಕ್ರಮಗಳನ್ನು ನೀಡಿದ್ದರು. ಉದ್ಯೋಗ ಖಾತ್ರಿ ಯೋಜನೆ, ಗ್ರಾಮೀಣ ಪ್ರದೇಶದ ಜನರಿಗೆ 100 ದಿನಗಳ ಉದ್ಯೋಗ ಕೊಡುವ ಕಾನೂನು ಮಾಡಿದರು. ಆಹಾರ ಭದ್ರತಾ ಕಾಯ್ದೆಯಿಂದ ಆಹಾರ ಇಲ್ಲದ ಕುಟುಂಬಗಳಿಗೆ ಕನಿಷ್ಠ 5 ಕೆ.ಜಿ. ಅಕ್ಕಿ, 3 ರೂ. ಅಕ್ಕಿ, 2 ರೂ. ಗೋಧಿ ಕೊಡುವ ಕಾರ್ಯಕ್ರಮವನ್ನು ಯುಪಿಎ ಸರ್ಕಾರ ನೀಡಿತು. ಅದೇ ಕಾರ್ಯಕ್ರಮ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯನ್ನು ಮುಫ‌ತ್ತಾಗಿ ನೀಡುವ ಕೆಲಸ ಮಾಡಿತು ಎಂದು ತಿಳಿಸಿದರು.

ಕೇವಲ ಬರೀ ಮಾತು: ಉಜ್ವಲ ಯೋಜನೆಯಡಿ ಗ್ಯಾಸ್‌ ಸಿಲಿಂಡರ್‌ ಉಚಿತವಾಗಿ ನೀಡಿಲ್ಲ. ಮೊದಲನೇ ಸಿಲಿಂಡರ್‌ ಮಾತ್ರ ಉಚಿತ, ನಂತರದ ಸಿಲಿಂಡರ್‌ಗೆ ಇನ್‌ಸ್ಟಾಲ್‌ಮೆಂಟ್‌ನಲ್ಲಿ ಹಣ ವಾಪಸ್‌ ಕಟ್ಟಬೇಕಾಗಿದೆ ಎಂದು ಟೀಕಿಸಿದರು. ಪುಲ್ವಾಮಾದಲ್ಲಿ 44 ಜನ ಯೋಧರು ಸತ್ತಿದ್ದಾರೆ. 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವಂಥ  ಕೀಳುಮಟ್ಟದ ಮಾತುಗಳನ್ನು ಬೇರೆ ಯಾರೂ ಆಡುವುದಿಲ್ಲ.  2016ನೇ ಸಾಲಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ಯುತವಾಗಿ ಚುನಾವಣೆ ನಡೆದಿತ್ತು. ಸರ್ಕಾರಗಳ ರಚನೆಯಾಯಿತು. ಇವತ್ತು ಜಮ್ಮು ಕಾಶ್ಮೀರದಲ್ಲಿ ಗಲಭೆ, ಯೋಧರು ಸಾಯುತ್ತಿದ್ದಾರೆ. ವಾತಾವರಣೆ ಕೆಟ್ಟಿದೆ. ಇವತ್ತು ಪ್ರಧಾನಿ ಮೋದಿಯವರ ಸಾಧನೆ ಏನೂ ಇಲ್ಲ. ಕೇವಲ ಬರೀ ಮಾತು.

ಶಾಂತಿ ನೆಮ್ಮದಿ ಇಲ್ಲ: ದೇಶವನ್ನು ಮುಂದೆ ತರುವಂಥ ವ್ಯಕ್ತಿ ಶಾಂತಿ ನೆಮ್ಮದಿಯನ್ನು ಸ್ಥಾಪಿಸುವ ಕೆಲಸ ಆಗಿಲ್ಲ.  ಬದಲಾವಣೆ ಆಗಲೇಬೇಕು. 28 ಕ್ಷೇತ್ರಗಳಲ್ಲಿ ಕನಿಷ್ಠ 22 ಕ್ಷೇತ್ರಗಳನ್ನು ಗೆಲ್ಲುವ ಭರವಸೆ ಇದೆ.  ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು. ರಾಹುಲ್‌ ಗಾಂಧಿ ಅವರು ದಕ್ಷಿಣ ಭಾರತದಿಂದ ಅದರಲ್ಲೂ ಕರ್ನಾಟಕದಲ್ಲಿ ಬಂದು ಸ್ಪರ್ಧೆ ಮಾಡಲಿ. ಇಂದಿರಾಗಾಂಧಿ, ಸೋನಿಯಾಗಾಂಧಿ ಆಯ್ಕೆ ಮಾಡಿದೆ. ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಬಂದು ಸ್ಪರ್ಧಿಸಬೇಕು ಎಂದು ಅವರು ಮನವಿ ಮಾಡಿದರು.

ದುಡ್ಡಿಗೇ ಕೆಟ್ಟ ಕಾಲ: ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಮಾತನಾಡಿ,ದುಡ್ಡಿಗೇ ಕೆಟ್ಟ ಕಾಲ ಬಂದದ್ದು ಪ್ರಧಾನಿ ಮೋದಿಯವರ ಕಾಲದಲ್ಲಿ. ಕಷ್ಟ ಬಂದಾಗ ಇರಲಿ ಅಂತ ದುಡ್ಡು ಇಡ್ತಿದ್ವಿ. ಈಗ ದುಡ್ಡಿಗೇ ಕೆಟ್ಟ ಕಾಲ ಬಂದಿದೆ. ವಿವೇಚನೆ ಇಲ್ಲದ ಪ್ರಧಾನಿ ಬಂದರೆ ದೇಶಕ್ಕೆ ಏನಾಗುತ್ತದೆ ಎಂಬುದನ್ನು ಈಗ ನೋಡಬಹುದು ಎಂದು ಟೀಕಿಸಿದರು.

ಜಿಲ್ಲೆಯ ಜನತೆ ಹಿರಿಯ ರಾಜಕಾರಣಿಗಳಾಧ ಗುರುಪಾದಸ್ವಾಮಿ ರಾಜಶೇಖರ ಮೂರ್ತಿ, ಎಂಸಿ ಬಸಪ್ಪ, ಚೆನ್ನಬಸಪ್ಪ, ಮಹದೇವಪ್ರಸಾದ್‌ ಅವರನ್ನು ನೆನೆಸಿಕೊಳ್ಳಬೇಕು. ಸಜ್ಜನರು ರಾಜಕೀಯಕ್ಕೆ  ಬರಬೇಕು. ಎಲ್ಲ ಸಮಾಜದ ಜನರು ಒಪ್ಪಿಕೊಳ್ಳಬೇಕು. ಧ್ರುವನಾರಾಯಣ ಅಂತಹ ಸಜ್ಜನ. ಹೆಮ್ಮೆ ಪಡುವಂಥ ಸಂಸದ. ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.