ಜಿಲ್ಲೆಯಲ್ಲಿ ನಡೆಯುತ್ತಾಆಪರೇಷನ್‌ ಕಮಲ?

Team Udayavani, May 17, 2018, 12:41 PM IST

yeddyurappa18.jpg

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೇ ಅತಂತ್ರ ವಿಧಾನಸಭಾ ಚುನಾವಣೆ ಸೃಷ್ಟಿಯಾಗಿರುವ ಬೆನ್ನಲೇ ಬಹುಮತದ ಕೊರತೆ ನಡುವೆಯು ಅಧಿಕಾರ ರಚನೆಗೆ ಮುಂದಾಗಿರುವ ಬಿಜೆಪಿ ನಡೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಬಿಜೆಪಿ ನಡೆಸುವ ಆಪರೇಷನ್‌ ಕಮಲ ಜಿಲ್ಲೆಯ ಕೈ ಶಾಸಕರ ಮೇಲೆ ನಡೆಯುತ್ತಾ? ಎಂಬ ಚರ್ಚೆಗಳು ಜಿಲ್ಲಾದ್ಯಂತ ಹರಿದಾಡುತ್ತಿದೆ.

ಮೇ 15 ರಂದು ಪ್ರಕಟಗೊಂಡ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫ‌ಲಿತಾಂಶ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕೋಟೆಯನ್ನು ಭದ್ರಪಡಿಸಿದ್ದು, ಚಿಂತಾಮಣಿ ಕ್ಷೇತ್ರದಲ್ಲಿ ಮಾತ್ರ ಹಾಲಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಗೆಲ್ಲುವ ಮೂಲಕ ಜೆಡಿಎಸ್‌ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. ಆದರೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ದಿಢೀರ್‌ ದೋಸ್ತಿಯಾಗಿ ಮೈತ್ರಿ ಸರ್ಕಾರ ರಚನೆಗೆ ಕಾಯತಂತ್ರ ರೂಪಿಸುತ್ತಿರುವ ವೇಳೆಯಲ್ಲಿಯೇ ಬಿಜೆಪಿಗೆ ಅಧಿಕಾರ ರಚನೆಗೆ ರಾಜ್ಯಪಾಲರು ನೀಡಿರುವ ಅವಕಾಶ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇತ್ತ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನಡೆಸುವ ಅಪರೇಷನ್‌ ಕಮಲಕ್ಕೆ ಜಿಲ್ಲೆಯ ಕೈ ಶಾಸಕರು ಒಳಾಗುತ್ತಾರೆಯೆ? ಎಂಬ ಚರ್ಚೆ ಜಿಲ್ಲಾದ್ಯಂತ ಬಿಸಿಬಿಸಿಯಾಗಿ ನಡೆಯುತ್ತಿದೆ. ಆದರೆ ಕಾಂಗ್ರೆಸ್‌ ನಾಯಕರು ಮಾತ್ರ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಪರೇಷನ್‌ ಕಮಲ ನಡೆಯಲ್ಲ. ಬಿಜೆಪಿ ನಾಯಕರ ಆಟ ಜಿಲ್ಲೆಯಲ್ಲಿ ಏನು ನಡೆಯುವುದಿಲ್ಲ. ಪಕ್ಷದ ಶಾಸಕರು ಪಕ್ಷದ ಜತೆ ಸಂಪರ್ಕದಲ್ಲಿ ಇದ್ದಾರೆ ಎನ್ನುತ್ತಿದ್ದಾರೆ. 

ಬಿಜೆಪಿ ನಡೆಸುವ ಅಪರೇಷನ್‌ ಕಮಲದ ಪಟ್ಟಿಯಲ್ಲಿ ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಇದ್ದಾರೆ ಎಂದು ಕೇಳಿ ಬರುತ್ತಿರುವ ಉಹಾಪೋಹಾದ ಮಾತುಗಳು ಸಾಕಷ್ಟು ಕುತೂಹಲ ಕೆರಳಿಸಿವೆ. ಆದರೆ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಮಾಜಿ ಸಿಎಂ ಸಿದ್ದರಾಮಯ್ಯ ನವರ ಅಪ್ತರಾಗಿರುವುದರಿಂದ ಬಿಜೆಪಿ ನಡೆಸುವ ಯಾವುದೇ ರೀತಿಯ ಆಪರೇಷನ್‌ ಕಮಲಕ್ಕೆ ಬೀಳುತ್ತಾರೆ ಎನ್ನುವುದು ಅಷ್ಟೊಂದು ಸುಲಭದ ಮಾತಲ್ಲ. ಆದರೆ ಬಿಜೆಪಿ ನಡೆಸುವ ಅಪರೇಷನ್‌ ಕಮಲಕ್ಕೆ ಜಿಲ್ಲೆಯ ಕೈ ಶಾಸಕರು ತುತ್ತಾಗಬಹುದೆಂಬ ಆತಂಕ ಕಾಂಗ್ರೆಸ್‌ ಪಕ್ಷಕ್ಕಿದೆ ಎನ್ನಲಾಗುತ್ತಿದೆ.

ಮೈತ್ರಿ ಸರ್ಕಾರ ಒಲವು ತೋರಿದ್ದ ಸುಧಾಕರ್‌ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಮಂಗಳವಾರ ಚುನಾವಣೆಯ ಫ‌ಲಿತಾಂಶ ಹೊರ ಬಿದ್ದು ಎರಡನೇ ಬಾರಿಗೆ ಶಾಸಕರಾಗಿ ಪುನರಾಯ್ಕೆಗೊಂಡ ವೇಳೆ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗ್ಧಾಳಿ ನಡೆಸಿದ್ದರು. 

ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್‌ ಪಕ್ಷದೊಂದಿಗೆ ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆ
ಮಾಡಲಿದೆ ಎಂದಿದ್ದರು. ಆದರೆ ಇದೀಗ ಬಿಜೆಪಿ ಅಧಿಕಾರ ರಚನೆಗೆ ಮುಂದಾಗಿರುವುದು ಜಿಲ್ಲೆಯ ರಾಜಕೀಯ ವಲಯದ ಮೇಲೆ ಏನೇದರೂ ಪರಿಣಾಮ ಬೀರಬಹುದೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

ಜಿಲ್ಲೆಯ ಯಾವ ಶಾಸಕರು ಕೂಡ ಆಪರೇಷನ್‌ ಕಮಲಕ್ಕೆ ಬೀಳುವುದಿಲ್ಲ. ಬಿಜೆಪಿಯವರದು ಬರೀ ಭ್ರಮೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳ ಶಾಸಕರು ಕೂಡ ಬೆಂಗ ಳೂರಿನಲ್ಲಿಯೆ ಇದ್ದಾರೆ. ಪಕ್ಷದ ಜೊತೆಗೆ ಸತತ ಸಂಪರ್ಕದಲ್ಲಿದ್ದಾರೆ. ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಪಕ್ಷಕ್ಕೆ ನಿಷ್ಠೆಯಾಗಿದ್ದು, ಬಿಜೆಪಿಯವರ ಆಟ ನಡೆಯದು.
 ಕೆ.ಎನ್‌.ಕೇಶವರೆಡ್ಡಿ ಕಾಂಗ್ರೆಸ್‌ ಜಿಲ್ಲಾದ್ಯಕ್ಷ 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.