CONNECT WITH US  

ಸೌಲಭ್ಯದ ಅರಿವಿಗೆ ಶೀಘ್ರ ಆ್ಯಪ್‌ ಬಿಡುಗಡೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನು ಹೆಚ್ಚು ಜನಸ್ನೇಹಿಯಾಗಿ ಮಾಡಲು ಹಾಗೂ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಆ್ಯಪ್‌ ಬಿಡುಗಡೆ ಮಾಡಲಾಗುವುದು. ಅಲ್ಲದೆ ಇಲಾಖೆಗೆ ಹೊಸದಾಗಿ 283 ಮಂದಿ ಅಧಿಕಾರಿಗಳ ನೇಮಕ ಮಾಡಲು ತಿಂಗಳಲ್ಲಿ ಆದೇಶ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ ಬಿ.ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಎಂ.ಸ್ಯಾಂಡ್‌ ಉತ್ಪಾ ದನಾ ಘಟಕಗಳಿಗೆ ಹಾಗೂ ಗ್ರಾನೈಟ್‌ ಗಣಿ ಪ್ರದೇಶ ಗಳಿಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಒಟ್ಟು 1,240 ಅಧಿಕಾರಿಗಳು ಹಾಗೂ ಸಿಬ್ಬಂದಿ ಇರಬೇಕು. ಸದ್ಯ ಕೇವಲ 398 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆ ಯಲ್ಲಿ ಇನ್ನೂ 849 ವಿವಿಧ ಹಂತದ ಹುದ್ದೆಗಳು ಖಾಲಿ ಇದೆ. ತಿಂಗಳಲ್ಲಿ 283 ಅಧಿಕಾರಿಗಳನ್ನು ಕೆಪಿಎಸ್‌ಸಿ ಮೂಲಕ ನೇಮಕ ಮಾಡಲು ಆದೇಶ ಮಾಡ ಲಾಗುವುದು ಎಂದು ಹೇಳಿದರು.

ಸಿಬ್ಬಂದಿ ಕೊರತೆಯಿಂದ ಅಕ್ರಮಕ್ಕೆ ಅವಕಾಶ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರತೆ ಪರಿಣಾಮ ಒಂದಿಷ್ಟು ಅಕ್ರಮಗಳಿಗೆ ಅವಕಾಶ ಇರಬಹುದು. ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆ ಗಳಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಜಿಲ್ಲಾಡಳಿಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ ಹಾಗೂ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಅಕ್ರಮ ಗಣಿಗಾರಿಕೆ ತಡೆಲು ಟಾಸ್ಕ್ ಪೋರ್ಸ್‌ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯದಲ್ಲಿ ಈ ಹಿಂದೆ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತೇ? ಎಂಬ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ಕೊಡದ ಸಚಿವರು, ಹಿಂದಿನ ಕಥೆ ನನಗೆ ಬೇಡ. ಮುಂದೆ ಇಲಾಖೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡದಂತೆ ಇಲಾಖೆಯನ್ನು ಚುರುಕುಗೊಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು. 

ಗಣಿ ಅಕ್ರಮಗಳ ಬಗ್ಗೆ ತನಿಖೆ: ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಡಿಸಿ ಅಧ್ಯಯನ ನಡೆಸಿ ಲೋಕಾಯುಕ್ತರಿಗೆ ವರದಿ ಸಲ್ಲಿಸಿರುವ ಕುರಿತು ಸಚಿವರ ಗಮನ ಸೆಳೆದಾಗ ಈ ಬಗ್ಗೆ ನನ್ನ ಗಮನಕ್ಕೆ ಯಾವುದೇ ವರದಿ ಬಂದಿಲ್ಲ. ಈ ಹಿಂದೆ ಅಕ್ರಮ ಗಣಿಗಾರಿಕೆ ನಡೆದಿರುವುದು ಸಾಬೀತಾದರೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

Trending videos

Back to Top