CONNECT WITH US  

ಇ-ಆಡಳಿತ ಅನುಷ್ಠಾನದಲ್ಲಿ ಕರ್ನಾಟಕ ಮೊದಲು

ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿಯೇ ಇ-ಆಡಳಿತ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಇ-ಆಡಳಿತದಿಂದ  ಸಾರ್ವಜನಿಕರಿಗೆ ಪಾರದರ್ಶಕ ಸೇವೆ ಜತೆಗೆ ನಾಗರಿಕರು ಸರ್ಕಾರದ ಆಡಳಿತ ವ್ಯವಸ್ಥೆಗೆ ಹತ್ತಿರವಾಗಲಿದ್ದಾರೆ ಎಂದು ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಎಂ.ರವಿಶಂಕರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಜಿಲ್ಲಾಡಳಿತ, ರಾಷ್ಟ್ರೀಯ ಮಾಹಿತಿ ಕೇಂದ್ರ  ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಸಹಯೋಗದಲ್ಲಿ ಜಿಲ್ಲೆಯ ಸಿ ವೃಂದದ ಸರ್ಕಾರಿ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ  ಇ-ಆಡಳಿತ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ,

ಸರಕಾರಿ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಆಡಳಿತ ವ್ಯವಸ್ಥೆಯು ತ್ವರಿತ ನಿರ್ವಹಣೆಯಲ್ಲಿ ಜರುಗುವ ಉದ್ದೇಶದಿಂದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಇ-ಆಡಳಿತವನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ಇ-ಆಡಳಿತ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ದೇಶದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗಳನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದರು.

ಸಿಬ್ಬಂದಿಗಳಿಗೆ ವಿಶೇಷ ತರಬೇತಿ: ಜಿಲ್ಲೆಯಲ್ಲಿರುವ ಸರ್ಕಾರಿ ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನದ ಕೌಶಲ್ಯತೆಯನ್ನು ಹೆಚ್ಚಿಸುವುದರಲ್ಲಿ ಜಿಲ್ಲಾ ಎನ್‌ಐಸಿ ತಂಡ ನಿರತವಾಗಿದೆ. ಇ ಆಡಳಿತವು ಅತ್ಯಂತ ಪರಿಣಾಮಕಾರಿ ವ್ಯವಸ್ಥೆಯಾಗಿದೆ.

ಜನಸಾಮಾನ್ಯರ ಪ್ರತಿ ದಿನದ ಬದುಕಿಗೆ ವಿದ್ಯಮಾನಗಳು ತ್ವರಿತ ನಿರ್ವಹಣೆಗೆ ಈ ವ್ಯವಸ್ಥೆಗೆ ನೆರವಾಗಲಿದೆ. ನಾಗರಿಕರು ಸರ್ಕಾರದ ಆಡಳಿತ ವ್ಯವಸ್ಥೆಗೆ ಹತ್ತಿರವಾಗಲಿದ್ದಾರೆ. ಹಾಗಾಗಿ ಸಿಬ್ಬಂದಿಗಳು ಇಲಾಖಾ ಮಾಹಿತಿಗಳನ್ನು ನಿರ್ಧಿಷ್ಟವಾಗಿ ಗಣಕೀಕರಣಗೊಳಿಸುವ ಮೂಲಕ ಆಡಳಿತ ನಿರ್ವಹಣೆ ಮಾಡಲು ಶ್ರಮಿಸಬೇಕು ಎಂದು ಹೇಳಿದರು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಸಿ ವೃಂದದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಮೂರು ದಿನಗಳ ತರಬೇತಿಯಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

Trending videos

Back to Top