CONNECT WITH US  

ಬೆಲೆ ಬಾಳುವಮರಗಳ ಮಾರಾಟ

ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅರಣ್ಯ ಇಲಾಖೆಗೆ ಮಾಹಿತಿ ನೀಡದೆ, ಕೆಇಬಿ ವಸತಿ ಆವರಣದಲ್ಲಿ ಬೆಳೆದಿದ್ದ ಬೆಲೆಬಾಳುವ ಮರಗಳನ್ನು ಬೆಸ್ಕಾಂ ಸಿಬ್ಬಂದಿಯೊಬ್ಬರು ಕಡಿದು ಮಾರಾಟ ಮಾಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮರಗಳನ್ನು ಕಡಿದ ಬೆಸ್ಕಾಂ ಅಧಿಕಾರಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲು ಮಾಡಿದ್ದಾರೆ.
ನೇರಳೆ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಕಡಿದಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಬೆಲೆ
ಬಾಳುವ ಮರಗಳಾಗಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಬೆಸ್ಕಾ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್‌ ಅರಣ್ಯ ಇಲಾಖೆಗೆ ಸೇರಿದ್ದ ಮರಗಳನ್ನು ಕಡಿದವರಾಗಿದ್ದು, ಇವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಜಯಚಂದ್ರ
ತಿಳಿಸಿದ್ದಾರೆ.


Trending videos

Back to Top