ಪಾಲಿಹೌಸ್‌ಗಳ ನಿರ್ಮಾಣಕ್ಕೆ ಆದ್ಯತೆ

Team Udayavani, Sep 20, 2018, 1:57 PM IST

chikk-3.jpg

ಚಿಕ್ಕಬಳ್ಳಾಪುರ: ರೈತರಿಗೆ ಶೂನ್ಯ ಬಂಡವಾಳದಲ್ಲಿ ಅಧಿಕ ಲಾಭ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇಸ್ರೇಲ್‌ ಮಾದರಿಯಲ್ಲಿ
ತೋಟಗಾರಿಕಾ ಕೃಷಿಗೆ ಆದ್ಯತೆ ನೀಡಲಾಗುವುದು ಎಂದ ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ, ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಗುಲ್ಬರ್ಗಾ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ರೈತರ ಬೇಡಿಕೆಗೆ ಅನುಗುಣನವಾಗಿ ಪಾಲಿಹೌಸ್‌ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸಿಕ ನಂದಿ ಗಿರಿಧಾಮದಲ್ಲಿ ಬುಧವಾರ ಜಿಲ್ಲೆಯ ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅವರು ಮಾತನಾಡಿ, ಕೃಷಿ ಸಚಿವರು, ನಾನು ಇತ್ತೀಚೆಗೆ ಇಸ್ರೇಲ್‌ಗೆ ಎಂಟು ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿದ್ದು. ಅದರಂತೆ ಇಸ್ರೇಲ್‌ ಮಾದರಿಯಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಬಹು ದಾದ ಕೃಷಿ ಪದ್ಧತಿಗಳ ಬಗ್ಗೆ ವರದಿಯೊಂದನ್ನು ಮುಂದಿನ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದರು.

ರೈತರಿಗೆ ಇಸ್ರೇಲ್‌ ಮಾದರಿ ಕೃಷಿಯ ಅರಿವು: ರಾಜ್ಯದ ತೋಟಗಾರಿಕಾ ಬೆಳೆಗಳಿಗೂ ಸಹ ಇಸ್ರೇಲ್‌ ಮಾದರಿ ಕೃಷಿ
ಪದ್ಧತಿಗಳು ಅಗತ್ಯವಿದೆ. ರೈತರು ಕೇವಲ ಆಹಾರ ಪದಾರ್ಥಗಳಾದ ಭತ್ತ, ಮುಸುಕಿನ ಜೋಳ ಬೆಳೆದರೆ ಮಾತ್ರ
ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿಲ್ಲ. ರೈತರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಗೊಳ್ಳಬೇಕಾದರೆ ಹಣ್ಣು, ತರಕಾರಿ ಬೆಳಗಳನ್ನು ಹೆಚ್ಚು ಬೆಳೆಯಲು ಪ್ರೋತ್ಸಾಹಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೃಷಿ ಜತೆಗೆ ತೋಟಗಾರಿಕಾ ಬೆಳೆಗಳಿಗೂ ಇಸ್ರೇಲ್‌ ಮಾದರಿ ತೋಟಗಾರಿಕಾ ಪದ್ಧತಿಯನ್ನು ಅನುಷ್ಠಾನಗೊಳಿಸಲು ನಿರ್ಧರಿದೆ. ಇಸ್ರೇಲ್‌ನಲ್ಲಿ ಹನಿ ನೀರಾವರಿ ಬಳಕೆ ಮಾಡಿ ನೀರಿನ ಮಿತ ಬಳಕೆ ಮಾಡಲಾಗುತ್ತಿದೆ. ಜತೆಗೆ ಸಾಕಷ್ಟು ವೈಜ್ಞಾನಿಕವಾಗಿ ಅಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಬೆಳೆಯಿಂದ ಬೆಳೆಗೆ ಸಾಕಷ್ಟು ಅಂತರ ಇರುತ್ತದೆ. ಅದೇ ರೀತಿ ರಾಜ್ಯದ ರೈತರಿಗೂ ಸಹ ಇಸ್ರೇಲ್‌ ಮಾದರಿ ಕೃಷಿ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರಕ್ಕೆ ಕೋಲ್ಡ್‌ ಸ್ಟೋರೆಜ್‌: ಜಿಲ್ಲೆಯಲ್ಲಿ ದ್ರಾಕ್ಷಿ, ಟೊಮೆಟೋ, ಆಲೂಗಡ್ಡೆ, ಹೂ, ಹಣ್ಣುಗಳನ್ನು ಹೆಚ್ಚಿನ
ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಗಳ ಸಂಸ್ಕರಣೆಗೆ ಅಗತ್ಯವಾಗಿ ಬೇಕಾದ ಕೋಲ್ಡ್‌ ಸ್ಟೋರೇಜ್‌ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದ್ರಾಕ್ಷಿ ಬೆಳೆಗೆ ಸಂಬಂಧಿಸಿದಂತೆ ವೈನ್‌ಪಾಕ್‌ ಆರಂಭಕ್ಕೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಅತಿವೃಷ್ಟಿ, ಅನಾವೃಷ್ಟಿಯಿಂದ 50 ಕೋಟಿ ನಷ್ಟ: ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿ ಹಾಗೂ ಆನಾವೃಷ್ಟಿ ಸಂಭವಿಸಿ ಒಟ್ಟು 50 ಕೋಟಿಯಷ್ಟು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈಗಾಗಲೇ ಈ ಬಗ್ಗೆ ಇಲಾಖೆ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದಲ್ಲಿ ಒಟ್ಟು 86 ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳಾಗಿ ಘೋಷಿಸಿದೆ. ಬೆಳೆಹಾನಿ ವಿವರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಿದ ತಕ್ಷಣ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.