ವಾರಕ್ಕೊಮ್ಮೆ ಯಶವಂತಪುರ-ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು


Team Udayavani, Mar 10, 2019, 6:21 AM IST

varakkomme.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಗೆ ಸಂಚರಿಸುವ 06521 ಸಂಖ್ಯೆಯ ಯಶವಂತಪುರ-ಹಜರತ್‌ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಪ್ರತಿ ಗುರುವಾರ ಚಿಕ್ಕಬಳ್ಳಾಪುರ-ಕೋಲಾರದ ಮೂಲಕ ಸಂಚರಿಸಲಿದ್ದು, ನೈರುತ್ಯ ರೈಲ್ವೆ ಇಲಾಖೆ ಅಧಿಕೃತ ಆದೇಶ ಹೊರ ಬಿದ್ದಿದೆ.

ಕಳೆದ ಮಂಗಳವಾರವಷ್ಟೇ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕೋಲಾರದ ಸಂಸದ ಕೆ.ಎಚ್‌.ಮುನಿಯಪ್ಪ ಮತ್ತಿತರರು ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ್ದರು. ಈಗ ರೈಲ್ವೆ ಇಲಾಖೆ ಅಧಿಕೃತವಾಗಿ ರೈಲು ಸಂಚಾರದ ಬಗ್ಗೆ ಪ್ರಕಟಣೆ ಹೊರಡಿಸಿದೆ. 

ಒಟ್ಟು 14 ಬೋಗಿಗಳು ಲಭ್ಯ: ಎಕ್ಸ್‌ಪ್ರೆಸ್‌ ರೈಲಿನಲ್ಲಿ ಒಟ್ಟು 14 ಬೋಗಿಗಳು ಲಭ್ಯವಿದ್ದು, 2 ಜಿಎಸ್‌ ಮತ್ತು 6 ಜಿಎಸ್‌ಸಿಎನ್‌ ಬೋಗಿಗಳ ಜೊತೆಗೆ 3 ಎಸಿಸಿಎನ್‌ ಹಾಗೂ 1ಎಸಿಸಿಡಬ್ಲೂ ಹಾಗೂ 2 ಎಸ್‌ಎಲ್‌ಆರ್‌/ಡಿ ಸೇರಿ ಒಟ್ಟು 14 ಬೋಗಿಗಳು ಇರಲಿವೆ. ಈ ಮೊದಲು ವಾರಕ್ಕೆ ಎರಡು ದಿನ ರೈಲು ಸಂಚಾರ ನಡೆಸಲಿದೆ ಎಂದು ಹೇಳಲಾಗಿತ್ತಾದರೂ ಇದೀಗ ವಾರಕ್ಕೊಮ್ಮೆ ಮಾತ್ರ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪ್ರತಿ ಗುರುವಾರ ಸಂಜೆ 6:30ಕ್ಕೆ ಬಿಟ್ಟು ಬರೋಬ್ಬರಿ 2,581 ಕಿ.ಮೀ ಕ್ರಮಿಸಲಿದೆ.

ಎಲ್ಲಿಂದ ಎಲ್ಲಿಗೆ ರೈಲು ಸಂಚಾರ ಮಾರ್ಗ: ಈ ರೈಲು ಯಶವಂತಪುರದಿಂದ ಯಲಹಂಕ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಬಂಗಾರಪೇಟೆ, ಜೋಲಾರಪೇಟೆ, ಕಟಾಪಡಿ, ರೇಣುಗುಂಟ, ಗುದುರೂ, ವಿಜಯವಾಡ, ವಾರಂಗಲ್‌, ಬಹರ್ಷದ್‌, ಚಂದ್ರಾಪುರ, ನಾಗಪುರ, ಟರೀಸ್‌, ಭೂಪಾಲ್‌, ಬೀನಾ, ಜಾನ್ಸಿ, ಆಗ್ರಾ, ಪಾಲ್ವಲ್‌ ಮೂಲಕ ಹಜರತ್‌ ನಿಜಾಮುದ್ಧೀನ್‌ ಮೂಲಕ ದೆಹಲಿ ತಲುಪಲಿದೆ.

ಜೂನ್‌ವರೆಗೂ ಸಂಚರಿಸುತ್ತೆ ರೈಲು: ಸದ್ಯ ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರದ ಮೂಲಕ ಸಂಚರಿಸಲಿರುವ ಯಶವಂತಪುರ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ಮಾರ್ಚ್‌ ಸೇರಿ ನಾಲ್ಕು ತಿಂಗಳು ಮಾತ್ರ ಸಂಚರಿಸುತ್ತದೆ ಎಂದು ರೈಲ್ವೆ ಇಲಾಖೆ ಅಧಿಕೃತವಾಗಿ ತಿಳಿಸಿದ್ದು, ಜೂನ್‌ 24 ರಂದು ಕೊನೆ ಸಂಚಾರ ನಡೆಸಲಿದೆ. ಮಾರ್ಚ್‌, ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳಲ್ಲಿ ರೈಲು ಸಂಚರಿಸುವ ದಿನಾಂಕವನ್ನು ಸಹ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ ನೈರುತ್ಯ ರೈಲ್ವೆ ಇಲಾಖೆ ಪ್ರಕಟಿಸಿದೆ. ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಗೆ ಬರುವ ಆದಾಯ ನೋಡಿಕೊಂಡು ಮುಂದಿನ ಸಂಚಾರವನ್ನು ರೈಲ್ವೆ ಇಲಾಖೆ ನಿರ್ಧರಿಸುವ ಸಾಧ್ಯತೆ ಇದೆ.

* ವಾರಕ್ಕೊಮ್ಮೆ ಮಾತ್ರ ಯಶವಂತಪುರ ನಿಜಾಮುದ್ದೀನ್‌ ರೈಲು
* ಜೂನ್‌ವರೆಗೂ ಸಂಚರಿಸಲು ರೈಲ್ವೆ ಮಂಡಳಿ ಒಪ್ಪಿಗೆ
* ಹವಾನಿಯಂತ್ರಿತ ಸೇರಿ ಒಟ್ಟು 14 ಬೋಗಿಗಳು ಲಭ್ಯ
* ಪ್ರತಿ ಗುರುವಾರ ಸಂಜೆ6:30ಕ್ಕೆ ಬೆಂಗಳೂರು ಬಿಡುವ ರೈಲು
* ಚಿಕ್ಕಬಳ್ಳಾಪುರ, ಕೋಲಾರದ ಮೂಲಕ ದೆಹಲಿ ಪ್ರಯಾಣ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.