ಚುನಾವಣಾ ಅಕ್ರಮ ತಡೆಗೆ 34 ಚೆಕ್‌ಪೋಸ್ಟ್‌ ಸ್ಥಾಪನೆ


Team Udayavani, Mar 16, 2019, 7:36 AM IST

chunavana.jpg

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾದಂತೆ ಚುನಾವಣಾ ಅಕ್ರಮಗಳ ತಡೆಗೆ ಭಾರೀ ಸಿದ್ಧತೆ ಕೈಗೊಂಡಿರುವ ಜಿಲ್ಲಾಡಳಿತ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರಿಗೆ ಹಂಚಲು ರಾಜಕೀಯ ಪಕ್ಷಗಳು ಸಾಗಾಟ ಮಾಡುವ ಅಕ್ರಮ ಮದ್ಯ, ಹಣ ಮತ್ತಿತರ ವಸ್ತುಗಳ ಮೇಲೆ ನಿಗಾ ವಹಿಸಿ ವಶಕ್ಕೆ ಪಡೆಯಲು ಬರೋಬ್ಬರಿ 34 ಚೆಕ್‌ಪೋಸ್ಟ್‌ ಸ್ಥಾಪಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದೆ.

ಗಡಿ ಪ್ರದೇಶದ ಸರಹದ್ದಿನಲ್ಲಿ ಚೆಕ್‌ಪೋಸ್ಟ್‌: ಕ್ಷೇತ್ರ ವ್ಯಾಪ್ತಿಯ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಕೆಲವು ತಾಲೂಕುಗಳು ಸೇರ್ಪಡೆಗೊಳ್ಳುವುದರಿಂದ ಅದರಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆ ಆಂಧ್ರದ ಗಡಿಯಲ್ಲಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಅಕ್ರಮಗಳು ಹೆಚ್ಚಾಗಿ ನಡೆದಿರುವ ಉದಾಹರಣೆಗಳು ಇರುವುದರಿಂದ ಗಡಿ ಪ್ರದೇಶದ ಸರಹದ್ದಿನಲ್ಲಿ ಒಟ್ಟು 34 ಚೆಕ್‌ ಪೋಸ್ಟ್‌  ಸ್ಥಾಪಿಸಿ ಪ್ರತಿ ವಾಹನಗಳ ತಪಾಸಣೆಗೆ ಮುಂದಾಗಿದೆ. ಕ್ಷೇತ್ರದಲ್ಲಿ ಒಟ್ಟು 63 ಫ್ಲೈಯಿಂಗ್‌ ಸ್ಕ್ವಾಡ್‌ಗಳನ್ನು ರಚಿಸಲಾಗಿದ್ದು, ಒಟ್ಟು 187 ಮಂದಿ ಸೆಕ್ಟರ್‌ ಅಧಿಕಾರಿಗಳನ್ನು ಚುನಾವಣಾ ನೀತಿ ಸಂಹಿತೆ ಪಾಲನೆಗೆ ಜಿಲ್ಲಾಡಳಿತ ನಿಯೋಜಿಸಿ ಅಕ್ರಮಗಳ ತಡೆಗೆ ಹದ್ದಿನ ಕಣ್ಣಿಟ್ಟಿದೆ. 

ತಾಲೂಕುವಾರು ಮಾಹಿತಿ: ಕ್ಷೇತ್ರದ ವ್ಯಾಪ್ತಿಗೆ ಬರುವ ಗೌರಿಬಿದನೂರು ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 9 ಫ್ಲೈಯಿಂಗ್‌ ಸ್ಕ್ವಾಡ್‌ ರಚಿಸಲಾಗಿದೆ. ಹಿಂದೂಪುರ ಗಡಿ ಭಾಗದಲ್ಲಿರುವ ತಾಲೂಕಿನಲ್ಲಿ ಒಟ್ಟು 5 ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ. 21 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗೂ 1 ವಿವಿಟಿ ಸ್ಥಾಪಿಸಲಾಗಿದೆ. 

ಬಾಗೇಪಲ್ಲಿ: ಆಂಧ್ರಪ್ರದೇಶಕ್ಕೆ ಕೂಗಳತೆಯ ದೂರದಲ್ಲಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಫ್ಲೈಯಿಂಗ್‌ ಸ್ಕ್ವಾಡ್‌ ರಚಿಸಲಾಗಿದ್ದು, 6 ಚೆಕ್‌ಪೋಸ್ಟ್‌ ರಚಿಸಲಾಗಿದೆ. ಒಟ್ಟು 22 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗೂ 1 ವಿವಿಟಿ ತಂಡವನ್ನು ರಚಿಸಲಾಗಿದೆ. ಚಿಕ್ಕಬಳ್ಳಾಪುರ:
ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಫ್ಲೈಯಿಂಗ್‌ ಸ್ಕ್ವಾಡ್‌ ಹಾಗೂ 21 ಸೆಕ್ಟರ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. 3 ವಿಎಸ್‌ಟಿ ಹಾಗೂ 1 ವಿವಿಟಿ ತಂಡಗಳನ್ನು ರ ರಚಿಸಲಾಗಿದೆ. 

ಯಲಹಂಕ: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಕ್ಷೇತ್ರದಲ್ಲಿ ಒಟ್ಟು 9 ಫ್ಲೈಯಿಂಗ್‌ ಸ್ಕ್ವಾಡ್‌, 3 ಚೆಕ್‌ಪೋಸ್ಟ್‌, 22 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗೂ ವಿವಿಟಿ ತಂಡಗಳನ್ನು ರಚಿಸಲಾಗಿದೆ. 

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದಲ್ಲಿ  9 ಫ್ಲೈಯಿಂಗ್‌ ಸ್ಕ್ವಾಡ್‌, 5 ಚೆಕ್‌ಪೋಸ್ಟ್‌ ಹಾಗೂ 25 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗೂ ವಿವಿಟಿ ತಂಡಗಳನ್ನು ರಚಿಸಲಾಗಿದೆ. 

ದೇವನಹಳ್ಳಿ: ಕ್ಷೇತ್ರದಲ್ಲಿ  6 ಫ್ಲೈಯಿಂಗ್‌ ಸ್ಕ್ವಾಡ್‌,  29 ಸೆಕ್ಟರ್‌ ಅಧಿಕಾರಿಗಳನ್ನು 2 ವಿಎಸ್‌ಟಿ ಹಾಗೂ 1 ವಿವಿಟಿ ತಂಡಗಳನ್ನು ರಚಿಸಲಾಗಿದೆ.  

ದೊಡ್ಡಬಳ್ಳಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 6 ಫ್ಲೈಯಿಂಗ್‌ ಸ್ಕ್ವಾಡ್‌, 3 ಚೆಕ್‌ಪೋಸ್ಟ್‌, 24 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗೂ 1 ವಿವಿಟಿ ತಂಡಗಳನ್ನು ರಚಿಸಲಾಗಿದೆ. 

ನೆಲಮಂಗಲ: ಕ್ಷೇತ್ರದಲ್ಲಿ ಒಟ್ಟು 6 ಫ್ಲೈಯಿಂಗ್‌ ಸ್ಕ್ವಾಡ್‌, 4 ಚೆಕ್‌ ಪೋಸ್ಟ್‌ ಹಾಗೂ 23 ಸೆಕ್ಟರ್‌ ಅಧಿಕಾರಿಗಳನ್ನು ಹಾಗೂ 2 ವಿಎಸ್‌ಟಿ ಹಾಗು 1 ವಿವಿಟಿ ತಂಡಗಳನ್ನು ರಚಿಸಲಾಗಿದೆ.

ಚುನಾವಣಾ ಅಧಿಕಾರಿಗಳ ನೇಮಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳಾಗಿ ಕೇಂದ್ರ ಸ್ಥಾನಕ್ಕೆ ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಆರತಿ, ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಸ್‌.ರಾಮಯ್ಯರನ್ನು ನೇಮಕ ಮಾಡಲಾಗಿದೆ. 

ಗೌರಿಬಿದನೂರು ವಿಧಾನಸಭಾ ಕ್ಷೇತ್ರಕ್ಕೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್‌.ಆರ್‌.ಕುಮಾರಸ್ವಾಮಿ (9448999242), ಬಾಗೇಪಲ್ಲಿ ಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ  ಕೋಶಾದ ಯೋಜನಾ ನಿರ್ದೇಶಕ ಜಿ.ಆರ್‌.ನಟರಾಜ್‌ (78295329754), ಚಿಕ್ಕಬಳ್ಳಾಪುರ  ಕ್ಷೇತ್ರದ ಚುನಾವಣಾ ಅಧಿಕಾರಿಯಾಗಿ ಚಿಕ್ಕಬಳ್ಳಾಪುರ ಉಪ ವಿಭಾಗದ ಚುನಾವಣಾ ಅಧಿಕಾರಿ ಬಿ.ಶಿವಸ್ವಾಮಿ (9448523683) ನೇಮಕ ಮಡಲಾಗಿದೆ. 

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ಬೆಂಗಳೂರು ಜಿಲ್ಲೆಯ ಉತ್ತರ ಉಪ ವಿಭಾಗಾಧಿಕಾರಿ ಎಲ್‌.ಸಿ.ನಾಗರಾಜ್‌ (9448089753), ಹೊಸಕೋಟೆ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48 ಹಾಗೂ 207ರ ವಿಶೇಷ ಭೂ ಸ್ವಾಧೀನ ಅಧಿಕಾರಿ ತಬಾಸುಮಾ ಜಹೀರಾ (9740822663). 

ದೇವನಹಳ್ಳಿ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಬಾಲಪ್ಪ ಹಂಡಿಗುಂಡ (962102106), ದೊಡ್ಡಬಳ್ಳಾಪುರ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ದೊಡ್ಡಬಳ್ಳಾಫ‌ುರದ ಉಪ ವಿಭಾಗಾಧಿಕಾರಿ ಮಂಜುನಾಥ ಸಿ., (9731090000).

ನೆಲಮಂಗಲ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ರಾಜೀವ್‌ ಗಾಂಧಿ ವಸತಿ ನಿಗಮದ ಜನರಲ್‌ ಮ್ಯಾನೇಜರ್‌ ಶಾಂತ ಎಲ್‌.ಹುಲಮಣಿ (9900844668) ರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು. 

ಅಕ್ರಮಗಳ ಬಗ್ಗೆ ದೂರಿಗೆ 1950 ಕರೆ ಮಾಡಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ದೂರು ಕೊಡಲು ಆಯಾ ತಾಲೂಕಿನ ಎಸ್‌ಟಿಡಿ ಕೋಡ್‌ನೊಂದಿಗೆ ಟೋಲ್‌ ಫ್ರೀ ದೂರವಾಣಿ ಸಂಖ್ಯೆ 1950 ಕರೆ ಮಾಡಬಹುದು. ಈ ಕಂಟ್ರೋಲ್‌ ರೂಂ ದಿನದ 24 ಗಂಟೆಗಳ ಕಾಲ ಕೂಡ ಕಾರ್ಯನಿರ್ವಹಿಸಲಿದೆ. ಜಿಲ್ಲಾ ಮಟ್ಟದಲ್ಲಿ ಕೂಡ ಎಂಸಿಎಂಸಿ ಕಮಿಟಿ  ರಚಿಸಲಾಗಿರುವ ಜಿಲ್ಲಾಡಳಿತ ಚುನಾವಣಾ ಅಧಿಕಾರಿಗಳ ಕಚೇರಿಗೆ ಹೆಚ್ಚುವರಿಯಾಗಿ ಲೆಕ್ಕಾಧಿಕಾರಿಗಳನ್ನು ನೇಮಿಸಲು ಮುಂದಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಅಕ್ರಮ ತಡೆಗೆ ಒಟ್ಟು 34 ಚೆಕ್‌ಪೋಸ್ಟ್‌  ನಿರ್ಮಿಸಿ ಪ್ರತಿ ಚೆಕ್‌ಪೋಸ್ಟ್‌ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ನಡೆಯುತ್ತಿದೆ. ಸರಕು ಸಾಗಾಣಿಕೆ ವಾಹನಗಳ ಜೊತೆಗೆ ಸರ್ಕಾರಿ ವಾಹನಗಳ ತಪಾಸಣೆಗೆಗೂ ಆದೇಶಿಸಲಾಗಿದೆ. 
-ಅನಿರುದ್ಧ್ ಶ್ರವಣ್‌, ಜಿಲ್ಲಾಧಿಕಾರಿ. ಚಿಕ್ಕಬಳ್ಳಾಪುರ  

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.