CONNECT WITH US  

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಅಪಾರ

ಭದ್ರಾವತಿ: ರಾಜ- ಮಹಾರಾಜರ ಕಾಲದಲ್ಲಿ ವಿದ್ವಾಂಸರನ್ನು ಕಣ್ತೆರಿಸಿದ್ದು ಹಾಗೂ ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿ ಸ್ವಾಭಿಮಾನದಿಂದ ಬದುಕುವಂತೆ ಮಾಡಿದ್ದು ಮಾಧ್ಯಮಗಳಾಗಿವೆ ಎಂದು ತಹಶೀಲ್ದಾರ್‌ ಎಂ.ಆರ್‌. ನಾಗರಾಜ್‌ ಹೇಳಿದರು.

 ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಹೊಸಮನೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಗಿಡಕ್ಕೆ ನೀರೆರುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕಾ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ ಬಹಳ ದೊಡ್ಡದಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿ ಧಿಗಳಿಂದ ಹಿಡಿದು ಸಮಾಜದ ಸಾಮಾನ್ಯ ವರ್ಗದ ಪ್ರತಿಯೊಬ್ಬರಿಗೂ ಪತ್ರಿಕೆಗಳು ಸಮಾಜ ಮುಖೀಯಾಗಿ ಕಾರ್ಯನಿರ್ವಹಿಸಿದೆ ಎಂದರು. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಭಾಷಾಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ| ಮೇಟಿ ಮಲ್ಲಿಕಾರ್ಜುನ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್‌. ರವಿಕುಮಾರ್‌, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್‌.ಕೃಷ್ಣಪ್ಪ ಮಾತನಾಡಿದರು.
 ಪೌರಾಯುಕ್ತ ಮನೋಹರ್‌ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿ, ವಿದ್ಯಾರ್ಥಿಗಳು ತಪ್ಪು ಹೆಜ್ಜೆಗಳನ್ನಿಡದೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಭವಿಷ್ಯದಲ್ಲಿ ಜೀವನ ಕಷ್ಟಸಾಧ್ಯ ಎಂದರು.

ಪ್ರಾಂಶುಪಾಲ ಡಾ| ಬಿ.ಜಿ.ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಂಘದ ಅಧ್ಯಕ್ಷ ಎನ್‌.ಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್‌ ಅಧ್ಯಕ್ಷ ಕಣ್ಣಪ್ಪ ಇದ್ದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎನ್‌. ಶ್ರೀರಾಮ್‌ ಮತ್ತು ಟಿ.ಎಸ್‌.ಆನಂದಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಸುಮಾ ಪ್ರಾರ್ಥಿಸಿದರು., ಸುಮನಾ
ಸಂಗಡಿಗರು ನಾಡಗೀತೆ ಹಾಡಿದರು. ಕಾರ್ಯದರ್ಶಿ ಕೂಡ್ಲಿಗೆರೆ ಮಂಜುನಾಥ್‌ ಸ್ವಾಗತಿಸಿದರು. ಟ್ರಸ್ಟ್‌ ಖಜಾಂಚಿ ಗಂಗಾನಾಯ್ಕ ವಂದಿಸಿದರು. ವಿದ್ಯಾರ್ಥಿನಿ ಎನ್‌.ರಾಧಾ ನಿರೂಪಿಸಿದರು. 

Trending videos

Back to Top