ಅಡಕೆ ಕದಿಯಲು ಹೊಂಚು ಹಾಕಿದವರ ಬಂಧನ

Team Udayavani, Dec 23, 2018, 10:28 AM IST

chikk-1.jpg

ಸೊರಬ: ಅಡಕೆ ಕದಿಯಲು ಹೊಂಚು ಹಾಕುತ್ತಿದ್ದರೆನ್ನಲಾದ ಮೂವರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಧ್ಯರಾತ್ರಿ ಮುಟುಗುಪ್ಪೆ ಹಾಗೂ ಎನ್‌.ದೊಡ್ಡೇರಿ ಗ್ರಾಮಗಳ ಬಳಿ ಅನುಮಾನಾಸ್ಪದವಾಗಿ ತಡರಾತ್ರಿ ಸಿದ್ದಾಪುರ ತಾಲೂಕು ಹಾಳದಘಟ್ಟ ಗ್ರಾಮದ ಪವನ್‌ ಕುಮಾರ, ಮುಕುಂದ ಹಾಗೂ ಅಣಜಿ ಗ್ರಾಮದ ಗಣೇಶ ಓಮಿನಿ ವಾಹನವನ್ನು ರಸ್ತೆ ಬದಿ ನಿಲ್ಲಿಸಿಕೊಂಡು ಕಾಯುತ್ತಿದ್ದರು.

ಕಳೆದ ಒಂದು ತಿಂಗಳ ಹಿಂದೆ ಎನ್‌. ದೊಡ್ಡೇರಿ ಗ್ರಾಮದ ನಾರಾಯಣಪ್ಪ ಎಂಬುವವರು 40 ಕೆ.ಜಿ ತೂಕದ 40 ಚೀಲ ಹಾಗೂ ರಾಜು ಪೂಜಾರಿಯ 80 ಕೆ.ಜಿ ಕೆಂಪಡಿಕೆ ಕಳ್ಳತನವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಕಳ್ಳರನ್ನು ಹಿಡಿಯಬೇಕೆಂಬ ಉದ್ದೇಶದಿಂದ ರಾತ್ರಿ ವೇಳೆ ಗಸ್ತು ತಿರುಗುವ ವ್ಯವಸ್ಥೆ ಮಾಡಿಕೊಂಡಿದ್ದರು. 

ಅನುಮಾನಸ್ಪದವಾಗಿ ನಿಂತಿದ್ದ ಈ ಮೂವರನ್ನು ಕಂಡ ಗ್ರಾಮಸ್ಥರು ಅವರನ್ನು ವಿಚಾರಿಸಿದಾಗ ಒಬ್ಬೊಬ್ಬರು ಒಂದೊಂದು ರೀತಿಯ ಉತ್ತರ ನೀಡಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ಅವರನ್ನು ಹಿಡಿದು, ಪೊಲೀಸರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ಸಮರ್ಪಕ ಉತ್ತರ ದೊರೆಯದಿದ್ದರಿಂದ ಶಿವಮೊಗ್ಗದ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ ನಂತರ ಸೊರಬ ಪೊಲೀಸರು ಸ್ಥಳಕ್ಕಾಗಮಿಸಿ ಮೂವರನ್ನು ಬಂಧಿಸಿ ಅವರಿಂದ ಕೆಎ-27 ಎಂ-2317 ಸಂಖ್ಯೆಯ ಓಮಿನಿ ವಾಹವನ್ನು ವಶಪಡಿಸಿಕೊಂಡಿದ್ದಾರೆ.

ಎನ್‌. ದೊಡ್ಡೇರಿ ಗ್ರಾಮದ ಎನ್‌.ದೊಡ್ಡೇರಿ ನಾರಾಯಣಪ್ಪ ಅವರಿಂದ ದೂರು ಪಡೆದ ಸೊರಬ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾತ್ರಿ ಗಸ್ತಿನಲ್ಲಿ ರಾಜು ಪೂಜಾರಿ ಮುಟಗುಪ್ಪೆ, ನಾಗರಾಜ.ಕೆ, ದುಗ್ಗಪ್ಪ ಪೂಜಾರಿ, ದೇವಿ ದುರ್ಗಪ್ಪ, ಹನೀಫ್‌ ಸಾಬ್‌, ನಾರಾಯಣಪ್ಪ ಮತ್ತಿತರರು ಇದ್ದರು. ಕಳೆದ ಒಂದು ತಿಂಗಳ ಹಿಂದೆ ಅಡಕೆ ಕಳವಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡದೇ ತಾವೇ ಕಳ್ಳರನ್ನು ಹಿಡಿಯಬೇಕೆಂದು ಎರಡು ಗ್ರಾಮದವರು ಒಟ್ಟಾಗಿ ರಾತ್ರಿಯೆಲ್ಲಾ ಗಸ್ತು ತಿರುಗುತ್ತಿದ್ದೆವು.

ನಮ್ಮಲ್ಲಿ ತಡರಾತ್ರಿಯವರೆಗೆ ಅಡಕೆ ಸುಲಿಯುತ್ತಾರೆ. ಅವರೆಲ್ಲರೂ ಮಲಗಿದ ಸಮಯದಲ್ಲಿ ಕಳ್ಳರು ಕಳ್ಳತನಕ್ಕೆ ಮುಂದಾಗುವುದನ್ನು ತಿಳಿದ ನಾವು ಪ್ರತಿದಿನ ಕಾಯುತ್ತಿದ್ದೆವು. ಕಾದಿದ್ದಕ್ಕೆ ಪ್ರತಿಫಲ ಸಿಕ್ಕಂತಾಗಿದೆ ಎಂದು ರಾಜು ಪೂಜಾರಿ ಮುಟುಗುಪ್ಪೆ ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.