ಬದುಕಿನ ವಿಕಾಸಕೆ ಧರ್ಮವೇ ಅಡಿಪಾಯ

Team Udayavani, Mar 19, 2019, 10:45 AM IST

chikk-1.jpg

ಬಾಳೆಹೊನ್ನೂರು: ಬದುಕಿನ ವಿಕಾಸಕ್ಕೆ ಭೌತಿಕ ಸಂಪತ್ತಷ್ಟೇ ಕಾರಣವಲ್ಲ. ಅದರ ಜೊತೆಗೆ ಒಂದಿಷ್ಟು ಶಿವಜ್ಞಾನದ ಅರಿವನ್ನು ಪಡೆಯಬೇಕಾಗುತ್ತದೆ. ಉಜ್ವಲ ಬದುಕಿಗೆ ಧರ್ಮವೇ ಅಡಿಪಾಯವಾಗಿದೆ ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗತವತ್ಪಾದರು ಅಭಿಪ್ರಾಯಪಟ್ಟರು.

ಅವರು ಶ್ರೀ ರಂಭಾಪುರಿ ಪೀಠದಲ್ಲಿ ಪ್ರಾರಂಭಗೊಂಡ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮೋತ್ತೇಜಕ ಸಮಾವೇಶದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಜಾಗತೀಕರಣ, ಉದಾರೀಕರಣ, ಮತ್ತು ಖಾಸಗೀಕರಣ ಬೆಳೆದರಷ್ಟೇ ಸಾಲದು. ಅದರ ಜೊತೆಗೆ ಮಾನವೀಯತೆಯ ಅಂತ:ಕರಣ ಬೆಳೆದು ಬರಬೇಕಾಗಿದೆ. ಪ್ರೀತಿ ನೀತಿ ಸತ್ಯ ಸ್ನೇಹ ವಿನಯಗಳ ಸೆಲೆ ಬತ್ತುತ್ತಿವೆ. ಸತ್ಪಥದಲ್ಲಿ ಬದುಕನ್ನು ಕಟ್ಟಿ ಬೆಳೆಸುವ ಅವಶ್ಯಕತೆ ಇದೆ. ವೀರಶೈವ ಧರ್ಮ ಸಂಪುಟದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವನ ದರ್ಶನದ ಮೌಲ್ಯಗಳನ್ನು ಪ್ರತಿಪಾದಿಸಿದ್ದಾರೆ ಎಂದರು.

ಸಮಾರಂಭ ಉದ್ಘಾಟಿಸಿದ ರಾಜ್ಯ ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ಮಾತನಾಡಿ, ಈ ನಾಡಿಗೆ ಧರ್ಮ ಪೀಠಗಳ ಕೊಡುಗೆ ಅಪಾರ. ಶ್ರೀ ರಂಭಾಪುರಿ ಪೀಠದ ವಿಶ್ವಬಂಧುತ್ವದ ಅಮೂಲ್ಯ ಸಂದೇಶಗಳನ್ನು ಅರಿತು ಬಾಳಬೇಕಾಗಿದೆ ಎಂದು
ಹೇಳಿದರು. 

ಶ್ರೀ ರಂಭಾಪುರಿ ಕ್ಷೇತ್ರ ದರ್ಶನ ಮರಾಠಿ ಸಾಹಿತ್ಯ ಕೃತಿಯನ್ನು ಶಾಸಕ ಟಿ.ಡಿ.ರಾಜೇಗೌಡ ಬಿಡುಗಡೆ ಮಾಡಿ ಮಾತನಾಡಿ, ನಮ್ಮೆಲ್ಲರಲ್ಲಿ ಸ್ವಾಭಿಮಾನ, ಧರ್ಮ ಶ್ರದ್ಧೆ ಬೆಳೆಸುವ ಅವಶ್ಯಕತೆ ಇದೆ. ಮಾನವೀಯ ಸಂಬಂಧಗಳನ್ನು ಮತ್ತಷ್ಟು ಬೆಳೆಸುವ ನಿಟ್ಟಿನಲ್ಲಿ ಧರ್ಮ ಪೀಠಗಳ ಕೊಡುಗೆ ಅಮೂಲ್ಯವಾದುದು ಎಂದರು.

ಹರಪನಹಳ್ಳಿ ವರಸದ್ಯೋಜಾತ ಶ್ರೀಗಳು ಮಾತನಾಡಿ, ಜಗತ್ತಿನ ದಾರ್ಶನಿಕರಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಕೊಟ್ಟ ಸಂದೇಶ ನಮ್ಮೆಲ್ಲರ ಬಾಳಿನ ಬುತ್ತಿ ಎಂದರು.
 
ನೇತೃತ್ವ ವಹಿಸಿದ ಎಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಸುಮಧುರ ಜೀವನಕ್ಕಾಗಿ ಪ್ರತಿಯೊಬ್ಬರು ಧರ್ಮಾಚರಣೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು, ಸೂಡಿ ಜುಕ್ತಿ ಹಿರೇಮಠದ ಡಾ| ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಎಸಳೂರು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು. 

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪುರಸ್ಕೃತ ಕಣ್ವಕುಪ್ಪಿ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಸೋಲ್ಲಾಪುರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಈರಯ್ಯಸ್ವಾಮಿ, ಸುನೀತಾ ಸುಭಾಷ ಉಳ್ಳಾಗಡ್ಡಿ ಪುಣೆ, ಶಶಿಕಲಾ ಶಿವಶರಣಪ್ಪ ಸೀರಿ, ಚನ್ನಗಿರಿಯ ಎಂ.ಯು. ರಾಜಶೇಖರಯ್ಯ, ಗುರುಸಿದ್ಧಯ್ಯ ಹಿರೇಮಠ. 

ಸರಸ್ವತಿ ಎಲ್‌.ಎಂ. ಉಮಾಪತಿ ಮೊದಲಾದ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಸನ್ಮಾನಿಸಿ ಗುರುರಕ್ಷೆ ನೀಡಿ ಶುಭ ಹಾರೈಸಿದರು. ನಮ್ರತಾ ಮತ್ತು ಭೂಮಿಕಾ ಸಹೋದರಿಯರು ಭರತ ನಾಟ್ಯ ಪ್ರದರ್ಶಿಸಿದರು. ಸಮಾರಂಭದ ನಂತರ ಶ್ರೀ ವೀರಭದ್ರಸ್ವಾಮಿ ಚಿಕ್ಕ ರಥೋತ್ಸವ ಸಂಭ್ರಮದಿಂದ ಜರುಗಿತು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.