ಬೆಸ್ಕಾಂ ಜನಸ್ನೇಹಿಯಾಗಿಸಲು ಯತ್ನ

Team Udayavani, Sep 14, 2017, 12:21 PM IST

14-CHIT-1.jpg

ಚಿತ್ರದುರ್ಗ: ಬೆಸ್ಕಾಂ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಿ ಜನಸ್ನೇಹಿ ಕಂಪನಿ ಮಾಡುವುದಲ್ಲದೆ, ದಕ್ಷಿಣ ಏಷ್ಯಾದ ನಂಬರ್‌ 1 ಕಂಪನಿ ಮಾಡುವ ಗುರಿ ಹೊಂದಲಾಗಿದೆ ಎಂದು ಬೆಸ್ಕಾಂ ಜಾಗೃತ ದಳದ ಪೊಲೀಸ್‌ ಅಧೀಕ್ಷಕ ಎಂ. ನಾರಾಯಣ ತಿಳಿಸಿದರು.

ಇಲ್ಲಿನ ಬೆಸ್ಕಾಂ ಮುಖ್ಯ ಇಂಜಿನಿಯರ್‌ ಕಚೇರಿ ಸಭಾಂಗಣದಲ್ಲಿ ಬೆಸ್ಕಾಂ ಜಾಗೃತ ದಳದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬೆಸ್ಕಾಂ ವಿಭಾಗ ವ್ಯಾಪ್ತಿಯ ಗ್ರಾಹಕರ ಕುಂದುಕೊರತೆ ಸಭೆ ಹಾಗೂ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಕ್ಷಿಣ ಏಷ್ಯಾದಲ್ಲಿ ಬೆಸ್ಕಾಂಗೆ ಘನತೆ, ಗೌರವವಿದೆ. ಇದನ್ನು ಎಲ್ಲ ಅಧಿಕಾರಿ, ಸಿಬ್ಬಂದಿ ಎತ್ತಿ ಹಿಡಿಯಬೇಕು. ತಮ್ಮ 
ಕರ್ತವ್ಯಗಳನ್ನು ಸರಿಯಾಗಿ ಪಾಲಿಸಬೇಕು. ಕಂಪನಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕು. ಬೆಸ್ಕಾಂ ಗುತ್ತಿಗೆದಾರರು ತಮ್ಮ ವ್ಯಾಪ್ತಿ ಬಿಟ್ಟು ಕೆಲಸ ಮಾಡುವಂತಿಲ್ಲ. ಪರವಾನಗಿ ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು, ಗ್ರಾಹಕರು, ಗುತ್ತಿಗೆದಾರರನ್ನು ಹೆದರಿಸಿ ಬೆದರಿಸಿ ವಿದ್ಯುತ್‌ ಕಳವು ಮಾಡುವವರಿಗೆ ಹೆಚ್ಚಿನ ದಂಡ ವಿಧಿಸಿ ಬೆಸ್ಕಾಂಗೆ ದಂಡದ ರೂಪದಲ್ಲಿ ಸಂಪನ್ಮೂಲ ಕ್ರೋಢೀಕರಿಸುವ ಉದ್ದೇಶ ನಮ್ಮದಲ್ಲ. ಈಗಾಗಲೇ ಕಂಪನಿ 2 ಕೋಟಿಗೂ ಅಧಿಕ  ಸಂಖ್ಯೆಯ ಗ್ರಾಹಕರು ಹಾಗೂ 17,200 ಕೋಟಿ ರೂ.ಗಳ ಆಸ್ತಿ ಹೊಂದಿದೆ. ಇದೆಲ್ಲ ಗ್ರಾಹಕರಿಂದಲೇ ಸಾಧ್ಯವಾಗಿದೆ ಎನ್ನುವುದನ್ನು ಮರೆಯಬೇಡಿ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಬೆಂಗಳೂರಿನಲ್ಲಿ ನಾಲ್ಕು, ಚಿತ್ರದುರ್ಗದಲ್ಲಿ ಒಂದು ಸೇರಿದಂತೆ ರಾಜ್ಯದ ಇತರೆ ಕಡೆಗಳಲ್ಲಿ ಒಟ್ಟು 11 ಬೆಸ್ಕಾಂ
ಜಾಗೃತದಳದ ಪೊಲೀಸ್‌ ಠಾಣೆಗಳಿವೆ. ಈ ಠಾಣೆಗಳಿಗೂ ಗ್ರಾಹಕರು ಇ-ಮೇಲ್‌, ಎಸ್‌ಎಂಎಸ್‌, ಲಿಖೀತ, ದೂರವಾಣಿ ಕರೆ ಮಾಡಿ ಅಥವಾ ಇನ್ಯಾವುದೇ ರೂಪದಲ್ಲಿ ದೂರು ನೀಡಬಹುದಾಗಿದೆ. ವಿತರಣಾ ಪರಿವರ್ತಕಗಳ ಅಳವಡಿಕೆ, ಸಲಕರಣೆಗಳ ನಿರ್ವಹಣೆ, ವಿದ್ಯುತ್‌ ಸರಬರಾಜು ಗುಣಮಟ್ಟ, ಅಡಚಣೆ, ತಾಂತ್ರಿಕ ವಿಷಯಗಳು, ಬಿಲ್‌ ಸಂಬಂಧಿತ ಗ್ರಾಹಕ ದೂರುಗಳಿಗೆ ಸ್ಪಂದಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡಲಾಗುತ್ತದೆ. ಅಕ್ರಮ ವಿದ್ಯುತ್‌ ಬಳಸುತ್ತಿದ್ದರೆ ಸಾರ್ವಜನಿಕರು ಸೂಕ್ತ ಮಾಹಿತಿ ನೀಡಿದರೂ ಬಹುಮಾನ ನೀಡಲಾಗುತ್ತದೆ. ಅಕ್ರಮ ವಿದ್ಯುತ್‌ ಸಂಪರ್ಕ ಪಡೆದ ವ್ಯಕ್ತಿ ಅಥವಾ ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು. 

ವಿದ್ಯುತ್‌ ಅಪಘಾತಗಳನ್ನು ತಡೆಗಟ್ಟಬೇಕು. ಅಕ್ರಮ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಂಡು ಜೀವಹಾನಿ ಮಾಡುತ್ತಿದ್ದಲ್ಲಿ ಅದರಲ್ಲೂ ಮಾನವ, ಸಾಕುಪ್ರಾಣಿ, ಕಾಡು ಪ್ರಾಣಿ ಸಂಕುಲದ ಅಮೂಲ್ಯ ಜೀವಗಳ ರಕ್ಷಣೆಗಾಗಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಬಳಕೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಶಾಮೀಲಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಬೆಸ್ಕಾಂ ಜಾಗೃತ ದಳದ ಡಿವೈಎಸ್ಪಿ ಸುರೇಶ್‌, ವಿಜಯಭಾಸ್ಕರ್‌, ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌, ಮುಖ್ಯ ಇಂಜಿನಿಯರ್‌ ಡಿ. ಜಯಣ್ಣ, ಬೆಸ್ಕಾಂ ಅಧಿಕಾರಿಗಳಾದ ಸುಭಾಶ್ಚಂದ್ರ ಮತ್ತಿತರ ಅಧಿಕಾರಿಗಳು, ಗ್ರಾಹಕರು, ಗುತ್ತಿಗೆದಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ದೂರು ಕೊಡಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್‌ ಸರಬರಾಜು ಕಲ್ಪಿಸಿ ನಂಬಿಕೆ 
ಉಳಿಸಿಕೊಳ್ಳುವುದು ಮುಖ್ಯ. ಗ್ರಾಹಕರು ವಿದ್ಯುತ್‌ ಸಂಪರ್ಕ ಪಡೆಯುವ ಸಂದರ್ಭದಲ್ಲಿ ಬೆಸ್ಕಾಂ ಅಧಿಕಾರಿಗಳು ಅಸಭ್ಯವಾಗಿ ವರ್ತಿಸಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಗ್ರಾಹಕರು ನೇರವಾಗಿ ಬೆಸ್ಕಾಂ ಜಾಗೃತ ದಳಕ್ಕೆ ದೂರು ನೀಡಬಹುದು. ಗ್ರಾಹಕರ ಕುಂದುಕೊರತೆ, ಸಮಸ್ಯೆಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಕೆಲಸ ಮಾಡದಿದ್ದರೆ ಸಹಾಯವಾಣಿ 1912 ಅಥವಾ 080-22381838, ಎಸ್ಪಿ ಕಚೇರಿ ಮೊಬೈಲ್‌: 94480 42375ಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಸ್ಕಾಂ ಜಾಗೃತದಳದ ಪೊಲೀಸ್‌ ಅಧೀಕ್ಷಕ ಎಂ. ನಾರಾಯಣ ತಿಳಿಸಿದರು.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.