ಸುಗಮ ಮತದಾನಕ್ಕೆ ಅಗತ್ಯ ಸಿದ್ಧತೆ


Team Udayavani, May 8, 2018, 5:13 PM IST

cta.jpg

ಚಿತ್ರದುರ್ಗ: ಮೇ 12 ರಂದು ನಡೆಯುವ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಿಂದ 76 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಎಲ್ಲಾ ವಿಧಾನಸಭೆಗಳಿಂದ 13,37,940 ಮತದಾರರಿದ್ದಾರೆ. ಇದರಲ್ಲಿ 6,74,851 ಪುರುಷ, 6,62,990 ಮಹಿಳಾ ಮತದಾರರು ಹಾಗೂ 99 ಇತರೆ ಮತದಾರರು ಸೇರಿದ್ದಾರೆ. ಒಟ್ಟು 1628 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದರು.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಪುರುಷ ಅಭ್ಯರ್ಥಿಗಳು 10, ಮಹಿಳಾ ಅಭ್ಯರ್ಥಿ 1 ಸೇರಿ ಒಟ್ಟು 11, ಚಳ್ಳಕೆರೆ 4 ಪುರುಷ ಅಭ್ಯರ್ಥಿಗಳು, ಚಿತ್ರದುರ್ಗ 16 ಪುರುಷ, 1 ಮಹಿಳಾ ಅಭ್ಯರ್ಥಿ ಸೇರಿ ಒಟ್ಟು 17, ಹಿರಿಯೂರು 11 ಪುರುಷ ಅಭ್ಯರ್ಥಿಗಳು ಹಾಗೂ 2 ಮಹಿಳಾ ಅಭ್ಯರ್ಥಿ ಸೇರಿ 13, ಹೊಸದುರ್ಗ 11 ಪುರುಷ ಅಭ್ಯರ್ಥಿಗಳು, ಹೊಳಲ್ಕೆರೆ 19 ಪುರುಷ ಅಭ್ಯರ್ಥಿಗಳು ಹಾಗೂ ಓರ್ವ ಮಹಿಳಾ ಅಭ್ಯರ್ಥಿ ಸೇರಿ ಒಟ್ಟು 20 ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದರು. 

 ಮೊಳಕಾಲ್ಮೂರು ಮತದಾನ ಕೇಂದ್ರಗಳು 279, ಪುರುಷ ಮತದಾರರು 1,17,002, ಮಹಿಳಾ ಮತದಾರರು 1,14,106, ಇತರರು 8 ಸೇರಿ ಒಟ್ಟು 2,31,116 ಮತದಾರರಿದ್ದಾರೆ. ಚಳ್ಳಕೆರೆ ಮತದಾನ ಕೇಂದ್ರಗಳು 254, ಪುರುಷ ಮತದಾರರು 1,05,158, ಮಹಿಳಾ ಮತದಾರರು 1,03,748, ಇತರರು 3 ಸೇರಿ ಒಟ್ಟು 2,08,909. ಚಿತ್ರದುರ್ಗ ಮತದಾನ ಕೇಂದ್ರಗಳು 280, ಪುರುಷ ಮತದಾರರು 1,25,311, ಮಹಿಳಾ ಮತದಾರರು 1,25,613, ಇತರರು 43 ಸೇರಿ ಒಟ್ಟು 2,50,967. ಹಿರಿಯೂರು ಮತದಾನ ಕೇಂದ್ರಗಳು 285, ಪುರುಷ ಮತದಾರರು 1,17,653, ಮಹಿಳಾ ಮತದಾರರು 1,17,755, ಇತರರು 36 ಸೇರಿ ಒಟ್ಟು 2,35,444. ಹೊಸದುರ್ಗ ಮತದಾನ ಕೇಂದ್ರಗಳು 236, ಪುರುಷ ಮತದಾರರು 95,600, ಮಹಿಳಾ ಮತದಾರರು 91,509, ಇತರರು 2 ಸೇರಿ ಒಟ್ಟು 1,87,111. ಹೊಳಲ್ಕೆರೆ ಮತದಾನ ಕೇಂದ್ರಗಳು 294, ಪುರುಷ ಮತದಾರರು 1,14,127, ಮಹಿಳಾ ಮತದಾರರು 1,10,259, ಇತರರು 7 ಸೇರಿ ಒಟ್ಟು 2,24,393 ಮತದಾರರಿದ್ದಾರೆ ಎಂದು ವಿವರಿಸಿದರು.

ಮೇ 12 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆಗಾಗಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಮತ್ತು ಡಿ-ಮಸ್ಟರಿಂಗ್‌ ಕೇಂದ್ರಗಳನ್ನು ಗುರುತಿಸಲಾಗಿದೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್‌ ಹಾಗೂ ಡಿ-ಮಸ್ಟರಿಂಗ್‌ ಕೇಂದ್ರ ಸರ್ಕಾರಿ ಪದವಿಪೂರ್ವ ಕಾಲೇಜು ಮೊಳಕಾಲ್ಮೂರು, ಚಳ್ಳಕೆರೆ ಕ್ಷೇತ್ರದಲ್ಲಿ ಎಚ್‌ ಪಿಪಿಸಿ ಕಾಲೇಜು ಚಳ್ಳಕೆರೆ, ಚಿತ್ರದುರ್ಗ ಕ್ಷೇತ್ರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಚಿತ್ರದುರ್ಗ, ಹಿರಿಯೂರು ಕ್ಷೇತ್ರದ ಸೆಂಟ್‌ ಆನ್ಸ್‌ ಕಾನ್ವೆಂಟ್‌ ಶಾಲೆ ವೇದಾವತಿ ನಗರ ಹಿರಿಯೂರು, ಹೊಸದುರ್ಗ ಕ್ಷೇತ್ರದ ತಾಯಮ್ಮ ಎಡತೊರೆ ಸದ್ದಿವಾಲ್‌ ಲಿಂಗಯ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹೊಳಲ್ಕೆರೆಯಲ್ಲಿ ತೆರೆಯಲಾಗಿದೆ.

ಜಿಪಂ ಸಿಇಒ ಹಾಗೂ ಸ್ವೀಪ್‌ ಸಮಿತಿ ಅಧ್ಯಕ್ಷ ಪಿ.ಎನ್‌. ರವೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ್‌ ಜೋಶಿ ಹಾಗೂ ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ ಸುದ್ದಿಗೋಷ್ಠಿಯಲ್ಲಿದ್ದರು. 

24 ಪ್ರಕರಣ ದಾಖಲು
ನೀತಿ ಸಂಹಿತೆ ಉಲ್ಲಂಘನೆಗೆ ಅಡಿ 24 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದೇ ಅವಧಿಯಲ್ಲಿ 25,724,44 ಲೀಟರ್‌ ಮದ್ಯ ವಶಪಡಿಸಿಕೊಳ್ಳಲಾಗಿದೆ. ಯಾವುದೇ ದಾಖಲೆಗಳಿಲ್ಲದೆ ನಗದು ಸಾಗಣೆ ಮಾಡುತ್ತಿದ್ದ ವೇಳೆ ಎಫ್‌ಎಸ್‌ಟಿಯಿಂದ 23,23,200 ರೂ. ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ 20,80,023 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ 1077 ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.