ಸರ್ಕಾರಿ ಶಾಲೆಗಳಿಗಿಲ್ಲ ಮೂಲ ಸೌಲಭ್ಯ


Team Udayavani, May 20, 2018, 5:52 PM IST

cta.jpg

ಚಿತ್ರದುರ್ಗ: ಮೂಲ ಸೌಲಭ್ಯಗಳ ಕೊರತೆ ಹಾಗೂ ಖಾಸಗಿ ಶಾಲೆಗಳ ಪೈಪೋಟಿಯಿಂದ ರಾಜ್ಯಾದ್ಯಂತ
ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂಬ ಆರೋಪ ವ್ಯಾಪಕವಾಗಿದ್ದು, ಇದಕ್ಕೆ ಚಿತ್ರದುರ್ಗ ಜಿಲ್ಲೆಯೂ
ಹೊರತಾಗಿಲ್ಲ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಕೊಠಡಿ ಸಮಸ್ಯೆ ಹಾಗೂ ಮೂಲ ಸೌಲಭ್ಯ ಕೊರತೆ ಕಾಡುತ್ತಿದೆ.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ಆದರೆ ಸರ್ಕಾರಿ ಶಾಲೆಗಳು ಮಾತ್ರ
ಮೂಲ ಸೌಲಭ್ಯ ಕೊರತೆಯಿಂದ ಬಳಲುತ್ತಿರುವುದು ವಿಪರ್ಯಾಸ.

ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ, ಚಿತ್ರದುರ್ಗ ಬುಡಕಟ್ಟು ಸಮುದಾಯ ಹಾಗೂ ಹಿಂದುಳಿದ ವರ್ಗದವರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಒಡಲಿನಲ್ಲಿ ಇಟ್ಟುಕೊಂಡಿರುವ ಬರಪೀಡಿತ ಜಿಲ್ಲೆ. ಇಲ್ಲಿನ ಬಹುತೇಕ ಸರ್ಕಾರಿ ಶಾಲೆಗಳಿಗೆ ಕುಡಿಯುವ
ನೀರು, ಶೌಚಾಲಯ, ಆಟದ ಮೈದಾನ, ಗ್ರಂಥಾಲಯ, ವಿದ್ಯುತ್‌ ಸಂಪರ್ಕ, ಕಾಂಪೌಂಡ್‌ ಇಲ್ಲವೇ ಇಲ್ಲ. ಸೌಲಭ್ಯದ
ಕೊರತೆಯಿಂದ ಅದೆಷ್ಟೋ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ.

ಸರ್ಕಾರಿ ಶಾಲೆಗಳಿಗೆ ರ್‍ಯಾಂಕ್‌ ಮತ್ತು ಹೆಚ್ಚು ಅಂಕ ಪಡೆದ ಶಿಕ್ಷಕರನ್ನೇ ನೇಮಕ ಮಾಡಲಾಗುತ್ತಿದೆ. ಆದರೆ ಪರೀಕ್ಷಾ ಫಲಿತಾಂಶದಲ್ಲಿ ಮಾತ್ರ ಸುಧಾರಣೆ ಆಗುತ್ತಿಲ್ಲ. ಮಕ್ಕಳ ಕಲಿಕಾ ಸಾಮರ್ಥ್ಯವೂ ಕುಂಠಿತವಾಗುತ್ತಿರುವುದರಿಂದ ಪೋಷಕರು ಮತ್ತು ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಶಾಲಾ ದಾಖಲಾತಿ ಆಂದೋಲನ ಮಾಡಿದರಷ್ಟೇ ಶಿಕ್ಷಣ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಮುಗಿಯುವುದಿಲ್ಲ, ಮೂಲ ಸೌಕರ್ಯ ಇಲ್ಲದಿರುವ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಇಚ್ಛಾಶಕ್ತಿ ತೋರಿದರೆ ಸರ್ಕಾರಿ ಶಾಲೆಗಳನ್ನು
ಮುಚ್ಚುವ ಪರಿಸ್ಥಿತಿಯೇ ಎದುರಾಗುತ್ತಿರಲಿಲ್ಲ.

ಆಂಧ್ರ ಗಡಿ ತಾಲೂಕುಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚು: ಮೂಲ
ಸೌಲಭ್ಯ ಕೊರತೆ ಜೊತೆಗೆ ಆಂದ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮೊಳಕಾಲ್ಮೂರು, ಚಳ್ಳಕೆರೆ ಮತ್ತು
ಹಿರಿಯೂರು ತಾಲೂಕುಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಮೊಳಕಾಲ್ಮೂರು ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 21, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 173, ಬದಲಿ ಶಿಕ್ಷಕರ 2 ಹುದ್ದೆ ಸೇರಿ ಒಟ್ಟು 196 ಹುದ್ದೆಗಳು ಖಾಲಿ ಇವೆ. ಚಳ್ಳಕೆರೆ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 14, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 34, ಬದಲಿ ಶಿಕ್ಷಕರ 2 ಹುದ್ದೆ ಸೇರಿ ಒಟ್ಟು 50 ಹುದ್ದೆ ಖಾಲಿ ಇವೆ. ಹಿರಿಯೂರು ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 5, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 23, ಬದಲಿ ಶಿಕ್ಷಕರು 2 ಹುದ್ದೆ ಸೇರಿ ಒಟ್ಟು 30 ಹುದ್ದೆಗಳು ಖಾಲಿ ಉಳಿದಿವೆ. ಜಿಲ್ಲೆಯ ಆರು ತಾಲೂಕುಗಳಿಂದ 40 ಕಿರಿಯ, 230 ಹಿರಿಯ, ಬದಲಿ 12 ಒಟ್ಟು 282 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಪ್ರೌಢಶಾಲಾ ವಿಭಾಗದಲ್ಲಿ 30 ಹುದ್ದೆಗಳು ಖಾಲಿ ಇರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ.
ಸರ್ಕಾರ ತಕ್ಷಣ ಶಿಕ್ಷಕರ ಕೊರತೆ ನೀಗಿಸದೇ ಇದ್ದರೆ ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳ ಮಕ್ಕಳು ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುವ ಅಪಾಯವಿದೆ.

ಖಾಸಗಿ ಶಾಲೆಗಳಿಗೇ ಹೆಚ್ಚು ಬೇಡಿಕೆ: 5-10 ಸಾವಿರ ರೂ.ಒಳಗೆ ವೇತನ ಪಡೆಯುವ ಖಾಸಗಿ ಶಾಲೆಗಳ
ಶಿಕ್ಷಕರು ಮಕ್ಕಳಿಗೆ ಉತ್ತಮ ಪಾಠ, ಪ್ರವಚನ ಮಾಡಿ ಕಲಿಕಾ ಸಾಮರ್ಥ್ಯ ಹೆಚ್ಚಿಸುತ್ತಾರೆ. ರ್‍ಯಾಂಕ್‌ ಪಡೆದು
ಸರ್ಕಾರಿ ಶಾಲೆ ಶಿಕ್ಷಕರ ಹುದ್ದೆ ಗಿಟ್ಟಿಸಿಕೊಳ್ಳುವವರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಿಲ್ಲ. ಹಾಗಾಗಿ
ಸಿರಿವಂತರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಎ ಸೇರಿಸುತ್ತಾರೆ. ಕೂಲಿ ಮಾಡಿಕೊಂಡು ಬದುಕಿನ ಬಂಡಿ ಎಳೆಯುವ ಕುಟುಂಬಗಳ ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಿದ್ದು, ಸೌಲಭ್ಯಗಳು ದೊರೆಯದಿದ್ದರೆ ಅವರು ಕೂಡ ಶಾಲೆಗೆ ಬಾರದೆ ಇರುವ ದಿನಗಳೂ ದೂರವಿಲ್ಲ. ಹಾಗಾಗಿ ಸರ್ಕಾರ ಅನುತ್ಪಾದಕ ಯೋಜನೆಗಳಿಗೆ ಕೋಟಿಗಟ್ಟಲೆ ಹಣ ಸುರಿಯುವ
ಬದಲು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಇಚ್ಛಾಶಕ್ತಿ ತೋರಬೇಕಿ¨

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.