CONNECT WITH US  

ಮಹನೀಯರ ಸ್ಮರಣೆ ಎಲ್ಲರ ಕರ್ತವ್ಯ

ಚಿತ್ರದುರ್ಗ: ಹೋರಾಟ, ತ್ಯಾಗ, ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯಾ ತಂದು ಕೊಟ್ಟ ಮಹನೀಯರನ್ನು ಸ್ಮರಿಸುವುದು
ನಮ್ಮೆಲ್ಲರ ಕರ್ತವ್ಯ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ನಗರಸಭೆ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯಾದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಜನರನ್ನು ಸಂಘಟಿಸಿ ಜಾಗೃತಗೊಳಿಸಿ ದೇಶಕ್ಕೆ ಸ್ವಾತಂತ್ರ್ಯಾ ತಂದು ಕೊಡುವಲ್ಲಿ ಹಲವು ಮಹನೀಯರ ಪರಿಶ್ರಮವಿದೆ. ಅವರ ಪರಿಶ್ರಮದ ಫಲವಾಗಿ ನಾವೆಲ್ಲರೂ 72ನೇ ಸ್ವಾತಂತ್ರ್ಯಾದಿನದ ಸಂಭ್ರಮಾಚರಣೆಯಲ್ಲಿ ತೊಡಗಿದ್ದೇವೆ. ಪೂರ್ವಿಕರು ತ್ಯಾಗ, ಬಲಿದಾನಗಳ ಮೂಲಕ ತಂದು ಕೊಟ್ಟ ಸ್ವಾತಂತ್ರ್ಯಾವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಕರ್ತವ್ಯ ಅರಿತು ಬಾಳಬೇಕು ಎಂದು ಕರೆ ನೀಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಪಂಡಿತ್‌ ಜವಾಹರಲಾಲ್‌ ನೆಹರು, ಸುಭಾಷ್‌ಚಂದ್ರ
ಬೋಸ್‌, ಭಗತ್‌ ಸಿಂಗ್‌, ಚಂದ್ರಶೇಖರ್‌ ಆಜಾದ್‌, ಬಿಪಿನ್‌ ಚಂದ್ರಪಾಲ್‌, ಬಾಲಗಂಗಾಧರ ತಿಲಕ್‌, ದಾದಾಬಾಯಿ
ನವರೋಜಿ, ಗೋಪಾಲಕೃಷ್ಣ ಗೋಖಲೆ ಹಾಗೂ ಸ್ವಾತಂತ್ರ್ಯಾಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ವೀರ ಯೋಧರ ಸ್ಮರಣೆ  ಅಗತ್ಯ ಎಂದರು.

ಟಿಪ್ಪೂಸುಲ್ತಾನ್‌, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ದೇವಿ, ಬೆಳವಡಿ ಮಲ್ಲಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ,
ಒನಕೆ ಓಬವ್ವ ಹಾಗೂ ಇದೇ ಜಿಲ್ಲೆಯವರಾದ ಎಸ್‌. ನಿಜಲಿಂಗಪ್ಪ, ದುಮ್ಮಿ ಮುರಿಗೆಪ್ಪ, ಮುಲ್ಕಾ ಗೋವಿಂದ ರೆಡ್ಡಿ, ಕೆ. ಹನುಮಂತಪ್ಪ ಹಾಗೂ ಇನ್ನೂ ಅನೇಕ ಮಹಾನ್‌ ನಾಯಕರನ್ನು ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಕಾರ್ಮಿಕರು, ರೈತರು, ಬಡವರು ಹಾಗೂ ದೀನದಲಿತರ, ಮಹಿಳೆಯರ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಈ ವರ್ಗಗಳ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯ ಎಂದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌, ಸಂಸದ ಬಿ.ಎನ್‌. ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ°, ಜಿಲ್ಲಾ ಪಂಚಾಯತ್‌ ಸಿಇಒ ಪಿ.ಎನ್‌. ರವೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ್‌ ಜೋಶಿ ಮೊದಲಾದವರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯಾ ಯೋಧರು ಹಾಗೂ ಅವರ ಅವಲಂಬಿತರು, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.


Trending videos

Back to Top