CONNECT WITH US  

ಜನರ ಸಮಸ್ಯೆ ನಿವಾರಣೆಗೆ ಕ್ರಮ'

ಚಿತ್ರದುರ್ಗ: ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಅದರಂತೆ ಜಿಲ್ಲಾಡಳಿತ ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಹೇಳಿದರು.

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯತ್‌ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಜನಸ್ಪಂದನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ತಿಂಗಳು ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಸ್ಪಿ ಸೇರಿದಂತೆ ಇಡೀ ಜಿಲ್ಲಾಡಳಿತ ಗ್ರಾಮೀಣ ಭಾಗದಲ್ಲಿ ಕುಂದುಕೊರತೆ
ಸಭೆ ಆಯೋಜಿಸುವುದರ ಜೊತೆಗೆ ಗ್ರಾಮದಲ್ಲೇ ವಾಸ್ತವ್ಯ ಹೂಡಲಿದೆ. ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು
ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುಬೇಕೆಂದು ತಿಳಿಯದೇ ಇರುವವರು ಜನಸ್ಪಂದನಾ ಸಭೆಯಲ್ಲಿ
ಸರ್ಕಾರದ ಸೌಲಭ್ಯಗಳ ಮಾಹಿತಿಗಳನ್ನು ತಿಳಿದುಕೊಳ್ಳಬೇಕು. ನಂತರ ಅರ್ಜಿ ಸಲ್ಲಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಗ್ರಾಮಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸರ್ಕಾರದ ನೂತನ ಯೋಜನೆಗಳ ಬಗ್ಗೆ ತಿಳಿದುಕೊಂಡು ಮೊದಲು ಗ್ರಾಮ ಮಟ್ಟದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಸರ್ಕಾರದಿಂದ ಬರುವ ಅನುದಾನದಿಂದ ಶೇ. 70ರಷ್ಟು ಕೆಲಸವಾದರೆ ಎಷ್ಟೋ ಜನರಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮಲೆಕ್ಕಾಧಿಕಾರಿಗಳು
ಹಾಗೂ ಪಿಡಿಒಗಳು ಕಡ್ಡಾಯವಾಗಿ ಕಚೇರಿಯಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರ ನೀಡುವ ವೃದ್ಧಾಪ್ಯ ವೇತನದ ಪಿಂಚಣಿ ಹಣ ದಲ್ಲಾಳಿಗಳ ಪಾಲಾಗದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು. ಮರಳುಗಾರಿಕೆ ಹಾಗೂ ಮನೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ.

ಜೂಜುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು ಕೂಡಲೇ ಪೊಲೀಸ್‌ ಇಲಾಖೆ ಹಾಗೂ ಅಬಕಾರಿ ಇಲಾಖೆಗಳು ಗಮನ ಹರಿಸಿ ಅಕ್ರಮ ತಟ್ಟೆಗಟ್ಟಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ ಮಾತನಾಡಿ,  ರ್ವಜನಿಕರ
ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತದೆ. ಸರ್ಕಾರ ಪ್ರಜೆಗಳ ಏಳಿಗೆಗಾಗಿ ಹಲವಾರು ಯೋಜನೆಗಳನ್ನು
ಜಾರಿಗೆ ತಂದಿದೆ. ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಕಂದಾಯ, ವೃದ್ಧಾಪ್ಯ, ಭೂ ಸರ್ವೇ, ಸಾರ್ವಜನಿಕ ರಸ್ತೆ ಮತ್ತಿತರ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಜವನಗೊಂಡನಹಳ್ಳಿ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮನವಿ ಸಲ್ಲಿಸಿದರು. ಜಿಪಂ ಸಿಇಒ ಪಿ.ಎನ್‌. ರವೀಂದ್ರ, ಅಪರ ಜಿಲ್ಲಾ ಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯ್‌ಕುಮಾರ್‌, ಹಿರಿಯೂರು ತಹಶೀಲ್ದಾರ್‌ ವೆಂಕಟೇಶಪ್ಪ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ. ಕೃಷ್ಣಪ್ಪ, ಬಿಸಿಎಂ ತಾಲೂಕು ವಿಸ್ತಾರಣಾ ಧಿಕಾರಿ ರಮೇಶ್‌, ತಾಪಂ ಅಧ್ಯಕ್ಷ ಚಂದ್ರಣ್ಣ, ಸದಸ್ಯ ನಾಗೇಂದ್ರ ಮತ್ತಿತರರು ಇದ್ದರು.

Trending videos

Back to Top