ಸಿಸಿ ರಸ್ತೆ ಪೂರ್ಣಗೊಂಡಿದ್ರೂ ಬಳಕೆ ಆಗ್ತಿಲ್ಲ!


Team Udayavani, Oct 22, 2018, 5:17 PM IST

cta-2.jpg

ಮೊಳಕಾಲ್ಮೂರು: ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡು ಹಲವಾರು ದಿನಗಳಾಗಿವೆ. ಆದರೂ ಪ್ರಯಾಣಿಕರ ಬಳಕೆಗೆ ನೀಡುವಲ್ಲಿ ಪಟ್ಟಣ ಪಂಚಾಯತ್‌ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.

ತಾಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣ ಧೂಳಿನಿಂದ ಕೂಡಿತ್ತು. ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಯಾಣಿಕರು ಪರದಾಡುವಂತಾಗಿತ್ತು. ಇದರ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳಿಗೆ ಸ್ಪಂದಿಸಿದ ಶಾಸ ಕರು, ಪಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಗರೋತ್ಥಾನ ಯೋಜನೆಯಡಿ 46 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. 

ಕಾಮಗಾರಿ ಪ್ರಾರಂಭವಾಗುವ ಮುನ್ನ ಬಸ್‌ ನಿಲ್ದಾಣದ ಆವರಣದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಕಾಮಗಾರಿಯ ಗುತ್ತಿಗೆ ಪಡೆದ ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಬಳಕೆಗೆ ನೀಡದೇ ಇರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್‌ ನಿಲ್ದಾಣ ಆವರಣದಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿದ್ದರೂ ಬಸ್‌ಗಳ ನಿಲುಗಡೆಗೆ ಪಪಂ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಇದರಿಂದಾಗಿ ಚಿತ್ರದುರ್ಗ, ದಾವಣಗೆರೆ , ಬಳ್ಳಾರಿ, ಬೆಂಗಳೂರು, ಚಳ್ಳಕೆರೆ , ರಾಯದುರ್ಗ, ಅನಂತಪುರ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳುವ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಕಿರಿದಾದ ಮುಖ್ಯ ರಸ್ತೆ ಬದಿಯಲ್ಲಿಯೇ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಸಮಸ್ಯೆ ಉದ್ಭವಿಸಿದೆ. ರಸ್ತೆಯ ಎರಡೂ ಬದಿಗಳಲ್ಲಿ ಗೂಡಂಗಡಿಗಳಿದ್ದು, ಅವರ ವ್ಯಾಪಾರಕ್ಕೂ ತೊಂದರೆಯಾಗುತ್ತಿದೆ.

ಕೆಲವು ಬಸ್‌ಗಳನ್ನು ಕೆಇಬಿ ವೃತ್ತದ ಬಳಿ ನಿಲುಗಡೆ ಮಾಡುವುದರಿಂದ ಮಹಿಳೆಯರು, ಮಕ್ಕಳು, ವೃದ್ಧರು ಕೆಇಬಿ ವೃತ್ತದವರೆಗೂ ನಡೆದುಕೊಂಡು ಬರಬೇಕಾಗಿದೆ. ರಸ್ತೆ ಬದಿಯ ವ್ಯಾಪಾರಸ್ಥರು ಜಾಗದ ಕೊರತೆಯಿಂದ ಪರದಾಡುವಂತಾಗಿದೆ. ಬಸ್‌ನಿಲ್ದಾಣದಲ್ಲಿ ಬೈಕ್‌ ಮತ್ತು ಕಾರುಗಳ ನಿಲುಗಡೆಗಾಗಿ ಅಗತ್ಯ ಜಾಗ ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಯೋ ವೃದ್ಧರು ಮತ್ತು ಗರ್ಭಿಣಿಯರು ಕೆಇಬಿ ವೃತ್ತದಿಂದ ಲಗೇಜ್‌ಗಳೊಂದಿಗೆ ಬಸ್‌ನಿಲ್ದಾಣಕ್ಕೆ ಬರಲು ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಪಪಂ ಮುಖ್ಯಾಧಿಕಾರಿಗಳು ನಿರ್ಲಕ್ಷಿಸದೆ ಸಿಸಿ ರಸ್ತೆಯನ್ನು ಕೂಡಲೇ ಉದ್ಘಾಟಿಸಬೇಕು.
ಬೆಳಗಲ್‌ ಈಶ್ವರಯ್ಯಸ್ವಾಮಿ, ರೈತ ಸಂಘದ ತಾಲೂಕು ಅಧ್ಯಕ್ಷ.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಪಟ್ಟಣ ಪಂಚಾಯತ್‌ಗೆ ಹಸ್ತಾಂತರಿಸಿಲ್ಲ. ಈ ಕಾಮಗಾರಿಯನ್ನು ಥರ್ಡ್‌ ಪಾರ್ಟಿಯಿಂದ ಪರೀಕ್ಷಿಸಿದ ನಂತರ ಸಾರ್ವಜನಿಕ ಬಳಕೆಗೆ ನೀಡಲಾಗುವುದು. 
ಎಸ್‌. ರುಕ್ಮಿಣಿ, ಪಪಂ ಮುಖ್ಯಾಧಿಕಾರಿ.

„ಎಸ್‌. ರಾಜಶೇಖರ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

8

Tragic: ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

1-asddad

Bharamasagara; ಕಾತ್ರಾಳು ಕೆರೆಗೆ 300 ಕ್ಕೂ ಹೆಚ್ಚು ಸತ್ತ ಕೋಳಿಗಳು : ಜನಾಕ್ರೋಶ

1-sdasd

Pre Wedding Shoot: ವೈದ್ಯನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.