ಚಿಕ್ಕಂದವಾಡಿ ಸರ್ಕಾರಿ ಪ್ರೌಢಶಾಲೆ ಗೋಡೆಯಲ್ಲಿ ಬಿರುಕು

Team Udayavani, Nov 27, 2018, 3:53 PM IST

cta-2.jpg

ಚಿಕ್ಕಜಾಜೂರು: ಸಮೀಪದ ಚಿಕ್ಕಂಡವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಹುತೇಕ ಕೊಠಡಿಗಳಲ್ಲಿ ಗೋಡೆ ಬಿರುಕು
ಬಿಟ್ಟಿದೆ. ಇದರಿಂದ ಮಳೆಗಾಲದಲ್ಲಿ ನೀರು ತರಗತಿಯೊಳಗೆ ಬರುತ್ತಿದೆ. ಆದ್ದರಿಂದ ಶಾಲೆಗೆ ಹೊಸ ಕಟ್ಟಡವನ್ನು ನಿರ್ಮಿಸಬೇಕು ಎಂದು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಒತ್ತಾಯಿಸಿದ್ದಾರೆ.

ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು 2007ರಲ್ಲಿ ನಿರ್ಮಿಸಲಾಗಿದೆ. 9 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ ಹಾಗೂ ಹಿಂದುಳಿದ ವರ್ಗಗಳ
ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 

ಪ್ರತಿ ವರ್ಷ ಉತ್ತಮ ಫಲಿತಾಂಶವೂ ಬರುತ್ತಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸದಾದ ಮತ್ತು ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಕೊಡಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಮೂರ್ತಿ, ರುದ್ರೇಶ್‌, ಜಗದೀಶ್‌, ಅಜ್ಜಪ್ಪ, ಗುರುಸ್ವಾಮಿ, ಎಸ್‌.ಈ. ನಾಗರಾಜ್‌, ನಿವೃತ್ತ ಇಂಜಿನಿಯರ್‌ ಈಶ್ವರಪ್ಪ ಮೊದಲಾದವರು ಒತ್ತಾಯಿಸಿದ್ದಾರೆ. 

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರು ತಮ್ಮ ಅನುದಾನದಲ್ಲಿ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲು 16 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ. ಶಾಸಕರೊಂದಿಗೆ ಚರ್ಚಿಸಿ ಈಗ ಬಿಡುಗಡೆಯಾಗಿರುವ ಅನುದಾನದ ಜೊತೆಗೆ ಮತ್ತಷ್ಟು ಹಣ ಬಿಡುಗಡೆ ಮಾಡಬೇಕು ಮತ್ತು ಹಳೆ ಶಾಲಾ ಕಟ್ಟಡದ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸುವಂತೆ ಮನವಿ ಮಾಡುವುದಾಗಿ ಬಿಜೆಪಿ ಮುಖಂಡ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಎಚ್‌. ಆನಂದಪ್ಪ ತಿಳಿಸಿದರು. 

ಪ್ರೌಢಶಾಲೆಯಲ್ಲಿ ಸದ್ಯ 100 ವಿದ್ಯಾರ್ಥಿಗಳಿದ್ದು, ಮಳೆ ಬಂದಾಗ ಶಾಲೆಯ ಎಲ್ಲ ನಾಲ್ಕು ಕೊಠಡಿಗಳಲ್ಲೂ ಮಳೆ ನೀರು ಗೋಡೆಯ ಮೂಲಕ ತರಗತಿಯೊಳಗೆ ಬರುತ್ತಿದೆ. ಇದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿ ಪಾಠ ಮಾಡುವ ಮತ್ತು
ಕೇಳುವ ಸ್ಥಿತಿ ನಿರ್ಮಾಣವಾಗಿದೆ.
ಕೆ.ಟಿ. ತಿಮ್ಮಪ್ಪ, ಮುಖ್ಯ ಶಿಕ್ಷಕರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.