ಹಿರೇಹಳ್ಳಿ ಗ್ರಾಮಕ್ಕೆ ಅಧಿಕಾರಿಗಳ ದೌಡು

Team Udayavani, Dec 11, 2018, 4:19 PM IST

cta-1.jpg

ಚಳ್ಳಕೆರೆ: ಹಸುಗೂಸಿನೊಂದಿಗೆ ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸೋಮವಾರ ತಾಲೂಕಿನ ಹಿರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗಂಡನ ಮನೆಯವರಿಂದ ಹೊರ ಹಾಕಲ್ಪಟ್ಟಿದ್ದ ಬಾಣಂತಿ ಶಾರದಮ್ಮ, ಚಳ್ಳಕೆರೆ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಸುಗೂಸಿನೊಂದಿಗೆ ಅನಾಥ ಸ್ಥಿತಿಯಲ್ಲಿ ಮಲಗಿದ್ದಳು. ಇದನ್ನು ಕಂಡ ಸಾರ್ವಜನಿಕರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ತಹಶೀಲ್ದಾರರು ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿ-ಮಗುವಿನ ಯೋಗಕ್ಷೇಮ ವಿಚಾರಿಸಿದ್ದರು.

ಈ ಬಗ್ಗೆ “ಉದಯವಾಣಿ’ ಪತ್ರಿಕೆಯ ಸೋಮವಾರದ ಸಂಚಿಕೆಯಲ್ಲಿ ವಿವರವಾದ ವರದಿ ಪ್ರಕಟಗೊಂಡಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಹಿರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನಾಪತ್ತೆಯಾಗಿರುವ ಶಾರದಮ್ಮಳ ಪತಿ ಮಲ್ಲಿಕಾರ್ಜುನನ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಸಿಡಿಪಿಒ ಸಿ.ಕೆ. ಗಿರಿಜಾಂಬ, ಸಾಂತ್ವನ ಕೇಂದ್ರದ ಕೌಟುಂಬಿಕ ಸಲಹೆಗಾರ ಸೋಮಶೇಖರ್‌ ಹಾಗೂ ಆಶಾ ಹಿರೇಹಳ್ಳಿ ಎ.ಕೆ. ಕಾಲೋನಿಯಲ್ಲಿರುವ ಮಲ್ಲಿಕಾರ್ಜುನನ ಮನೆಗೆ ಭೇಟಿ ನೀಡಿದ್ದರು. ಬಾಣಂತಿ ಶಾರದಮ್ಮಳನ್ನು ಮನೆಗೆ ಕರೆ ತಂದು ಆಕೆಯನ್ನು ಉತ್ತಮವಾಗಿ ನೋಡಿಕೊಳ್ಳಬೇಕು ಎಂದು ಮಲ್ಲಿಕಾರ್ಜುನನ ತಂದೆ-ತಾಯಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸರ್ಕಾರಿ ಆಸ್ಪತ್ರೆಯಲ್ಲಿರುವ ಬಾಣಂತಿ ಶಾರದಮ್ಮಳನ್ನು ಹಿರೇಹಳ್ಳಿಗೆ ಕರೆ ತಂದ ಕೂಡಲೇ ಆಕೆ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ
ಹಿರೇಹಳ್ಳಿಯ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಿರೇಹಳ್ಳಿಯ ಕಂದಾಯ ಅಧಿಕಾರಿ ಮತ್ತು ಗ್ರಾಮಲೆಕ್ಕಾಧಿಕಾರಿಯವರು ಮಲ್ಲಿಕಾರ್ಜುನನ ಪೋಷಕರೊಂದಿಗೆ ಚರ್ಚೆ ನಡೆಸಿದ್ದಾರೆ. ಮಲ್ಲಿಕಾರ್ಜುನನ್ನು ಕೂಡಲೇ ಪತ್ತೆ ಹಚ್ಚುವಂತೆ ಪೊಲೀಸ್‌ ಅಧಿಕಾರಿಗಳಿಗೂ ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ ತಿಳಿಸಿದರು.

ನಾಪತ್ತೆಯಾಗಿರುವ ಮಲ್ಲಿಕಾರ್ಜುನನ ತಂದೆ ದುರ್ಗಪ್ಪನ ವಿಚಾರಣೆ ನಡೆಸಲಾಗಿದೆ. ಇನ್ನೂ ಎರಡೂಮೂರು ದಿನಗಳೊಳಗೆ ಮಲ್ಲಿಕಾರ್ಜುನನ್ನು ಎಲ್ಲಿದ್ದರೂ ಕರೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಳಕು ಠಾಣೆ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಮಲ್ಲಿಕಾರ್ಜುನನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
 ಎಸ್‌. ರೋಷನ್‌ ಜಮೀರ್‌, ಡಿವೈಎಸ್ಪಿ 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.