ಶಾಸಕರ ಖರೀದಿಗೆ ಮುಂದಾದ ಬಿಜೆಪಿಯದು ಹೇಡಿತನದ ಕೃತ್ಯ


Team Udayavani, Jan 17, 2019, 9:03 AM IST

cta-3.jpg

ಚಿತ್ರದುರ್ಗ: ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಪಕ್ಷ ಮತ್ತು ಆ ಪಕ್ಷದ ಮುಖಂಡರು ರಾಜ್ಯದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿರುವ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಅಧಿಕಾರದ ಹಿಂದೆ ಬಿದ್ದಿರುವ ಬಿಜೆಪಿಯವರಿಗೆ ಬಹುಮತವಿಲ್ಲದಿದ್ದರೂ ಸದಾ ಗೊಂದಲಮಯ ಹೇಳಿಕೆ ನೀಡುವ ಮೂಲಕ ರಾಜ್ಯದ ಜನತೆಯನ್ನು ತಪ್ಪುದಾರಿಗೆಳೆಯುತ್ತಿದ್ದಾರೆ. ಸಂವಿಧಾನಬದ್ಧವಾಗಿ ಬಹುಮತ ಇದ್ದವರಿಗೆ ಆಡಳಿತ ನಡೆಸಲು ಬಿಡದೆ ಸಮ್ಮಿಶ್ರ ಸರ್ಕಾರದಲ್ಲಿನ ಶಾಸಕರ ಖರೀದಿ ಮಾಡುವ ಷಡ್ಯಂತ್ರವನ್ನು ರಾಜ್ಯ ಸರ್ಕಾರ ರಚನೆಯಾದ ದಿನದಿಂದಲೂ ಮಾಡಲಾಗುತ್ತಿದೆ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕೆಂಬ ಕೆಟ್ಟ ಹಂಬಲದಿಂದ ಶಾಸಕರ ಖರೀದಿಗೆ ಮುಂದಾಗಿರುವುದು ಅತ್ಯಂತ ಹೇಡಿತನದ ಕೃತ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ಹಸನ್‌ ತಾಹೀರ್‌ ಮಾತನಾಡಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸೂಚನೆಯಂತೆ ಅರ್ಧ ಗಂಟೆ ಕಾಲ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮನೆ ಎದುರು ಪ್ರತಿಭಟನೆ ನಡೆಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಸಿಗದ ಕಾರಣ ನಿರಾಸೆಗೊಂಡ ಬಿಜೆಪಿ, ಅಧಿಕಾರ ಕೈತಪ್ಪಿ ಹೋಗಿದ್ದರಿಂದ ಮೈತ್ರಿ ಸರ್ಕಾರ ಆಡಳಿತ ನಡೆಸಲು ಬಿಡದೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ನೀಡಲಾಗುತ್ತಿದೆ. ಆರಂಭದಿಂದಲೇ ಸರ್ಕಾರಕ್ಕೆ ಅಡ್ಡಿಪಡಿಸುತ್ತಲೇ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಕಾಂಗ್ರೆಸ್‌ ಶಾಸಕರನ್ನು ಖರೀದಿಸಲು ರೆಸಾರ್ಟ್‌ಗಳಲ್ಲಿ ಬೀಡು ಬಿಟ್ಟಿದ್ದಾರೆ. ಹೇಗಾದರೂ ಮಾಡಿ ಸಮ್ಮಿಶ್ರ ಸರ್ಕಾರವನ್ನು ಕೆಡವಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಬೇಕೆಂಬ ತಂತ್ರಗಾರಿಕೆ ಫಲಿಸುವುದಿಲ್ಲ. ಇನ್ನಾದರೂ ಬಿಜೆಪಿ ನಾಯಕರು ಅಧಿಕಾರದ ಆಸೆ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಾಕೀತು ಮಾಡಿದರು.

ಯುವ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಪ್ರತಿಭಟನಾಕಾರರು ಆಗಮಿಸುವ ಮುನ್ನವೇ ಶಾಸಕರ ನಿವಾಸದ ಗೇಟ್ ಬಂದ್‌ ಮಾಡಿ ಬ್ಯಾರಿಕೇಡ್‌ಗಳನ್ನು ಅಡ್ಡ ಇಟ್ಟಿದ್ದರು. ಇದರಿಂದ ಕುಪಿತಗೊಂಡ ಯುವ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಘೋಷಣೆ ಕೂಗಿದರು. ಇದರಿಂದ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟಾಗಿತ್ತು.

ಯುವ ಕಾಂಗ್ರೆಸ್‌ ವತಿಯಿಂದ ಬಿಜೆಪಿ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎನ್ನುವ ವಿಷಯ ಅರಿತ ಪೊಲೀಸರು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಮನೆಗಳಿಗೆ ಬಿಗಿ ಬಂದೋಬಸ್ತ್ ಮಾಡಿದ್ದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಧು ಪಾಲೇಗೌಡ, ವಸೀಂ, ಅಶೋಕ್‌ ನಾಯ್ಡು, ಸಾದತ್‌ ಬಗ್ಗು, ಜಮೀಲ್‌, ಆಜಾಂ, ಇಮ್ತಿಯಾಜ್‌, ಫಾರೂಖ್‌, ಯೂನೂಸ್‌, ಕರಿಯಪ್ಪ, ರೆಹಮಾನ್‌, ಶಶಾಂಕ್‌, ಖುದ್ದೂಸ್‌ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.